ಸಿಗಂದೂರಿನಲ್ಲಿ ಹೋಮ, ಪೂಜೆ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ, ಚಂದ್ರಯಾನ 3 ಯಶಸ್ಸಿಗೆ ಎಲ್ಲೆಲ್ಲಿ ಹೇಗಿದೆ ಹಾರೈಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 AUGUST 2023

SHIMOGA : ಇಸ್ರೋದ ಚಂದ್ರಯಾನ 3 ಯೋಜನೆಯ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲಿ ಎಂದು ಜಿಲ್ಲೆಯಾದ್ಯಂತ ಜನರು ಹಾರೈಸಿದ್ದಾರೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರುತ್ತಿದೆ.

ಎಲ್ಲೆಲ್ಲಿ ಪೂಜೆ, ಪ್ರಾರ್ಥನೆ ನಡೆಯುತ್ತಿದೆ?

ಸಿಗಂದೂರು ದೇವಿ ಸನ್ನಿಧಿಯಲ್ಲಿ ಹೋಮ

ಸಿಗಂದೂರು : ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇಸ್ರೋ ವಿಜ್ಞಾನಿಗಳ ಅಹೋರಾತ್ರಿ ಪರಿಶ್ರಮಕ್ಕೆ ಫಲ ಸಿಗಲಿ, ಇದರೊಂದಿಗೆ ಭಾರತದ ಕೀರ್ತಿ ಇನ್ನಷ್ಟು ಹೆಚ್ಚಲಿ ಎಂದು ಬುಧವಾರ ಬೆಳಗ್ಗೆ 9.30ರಿಂದ ದುರ್ಗಾ ಸಪ್ತಶತಿ ಪಾರಾಯಣ, ಚಂಡಿಕಾ ಹೋಮ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್.ಹೆಚ್.ಆರ್, ವ್ಯವಸ್ಥಾಪಕ ಪ್ರಕಾಶ್  ಭಂಡಾರಿ, ದೇವಸ್ಥಾನದ ಸಿಬ್ಬಂದಿ ಹಾಗೂ ಭಕ್ತರು ಹಾಜರಿದ್ದರು.

ಇದನ್ನೂ ಓದಿ – ಇನ್ಮುಂದೆ ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಸ್ಟಾಪ್‌ ಕೊಡಲಿವೆ 4 ಎಕ್ಸ್‌ಪ್ರೆಸ್‌ ರೈಲುಗಳು, ಯಾವ ರೈಲು? ಟೈಮಿಂಗ್‌ ಏನು?

ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಸಾಗರ : ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇರುವ ಹಜರತ್ ಸೈಯದ್ ರಾಜ್ ಬಕ್ಷ್ ವಲಿ ಅಲ್ಲಾಹ್ ದರ್ಗಾದಲ್ಲಿ  ವಿಶೇಷ ಪ್ರಾರ್ಥನೆ ನಡೆಸಲಾಯಿತು. ಮಂಗಳವಾರ ಸಂಜೆ ಮಘರೀಬ್ ನಮಾಜ್ ನಂತರ ಮುಸ್ಲಿಂ ಸಮುದಾಯದವರು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದರ್ಗಾ ಸಮಿತಿಯ ಅಧ್ಯಕ್ಷ ಅಕ್ಬರ್ ಖಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಪ್ರಾರ್ಥನೆ ಆಗಿದ್ದು ಮೌಲಾನ ಮೊಹಮ್ಮದ್ ಅಶ್ರಫ್ ರಜಾ ಅಶ್ರಫಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಯ್ಯದ್ ನಿಯಾಝ್, ಜಮೀಲ್ ಸಾಗರ್, ಸಮೀವುಲ್ಲಾ, ಅಕ್ರಮ್, ರಶೀದ್, ನಜೀರ್ ಹಾಗೂ ಇನ್ನಿತರರು ಹಾಜರಿದ್ದರು.‌

CHANDRAYANA3ಗಣಪತಿಗೆ ಮೇಯರ್‌ ನೇತೃತ್ವದಲ್ಲಿ ಪೂಜೆ

ಶಿವಮೊಗ್ಗ : ಮಹಾನಗರ ಪಾಲಿಕೆ ಆವರಣದಲ್ಲಿರುವ ವರಪ್ರದ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮೇಯರ್‌ ಶಿವಕುಮಾರ್‌ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಉಪ ಮೇಯರ್‌, ಪಾಲಿಕೆ ಸದಸ್ಯರು, ಸಿಬ್ಬಂದಿ ಸೇರಿ ಹಲವರು ಇದ್ದರು.

CHANDRAYANA2

ಯೋಗಪಟುಗಳಿಂದ ವಿಜ್ಞಾನಿಗಳಿಗೆ ಶುಭ ಹಾರೈಕೆ

ಶಿವಮೊಗ್ಗ : ಶಿವಗಂಗಾ ಯೋಗ ಕೇಂದ್ರದ ಯೋಗಪಟುಗಳು ಚಂದ್ರಯಾನ ಯಶಸ್ವಿಯಾಗಲು ಶುಭ ಹಾರೈಸಿದ್ದಾರೆ. ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಎಲ್ಲಾ ಯೋಗಪಟುಗಳು ಇಸ್ರೋ ಸಂಸ್ಥೆಯ ವಿಜ್ಞಾನಿಗಳಿಗೆ ಹಾಗೂ ವಿಶೇಷವಾಗಿ ಶಿವಮೊಗ್ಗದ ವಿಜ್ಞಾನಿಗಳಾದ ಪುಟ್ಟಮ್ಮ ಶಿವಾನಿ ಹಾಗೂ ಚೈತ್ರ ಅವರಿಗೆ ವಿಶೇಷ ಧನ್ಯವಾದ ಅರ್ಪಿಸಿದರು.

CHANDRAYANA1

ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಹಾರೈಕೆ

ಶಿವಮೊಗ್ಗ : ಚಂದ್ರಯಾನ 3 ಯಶಸ್ವಿಯಾಗಲಿ ಎಂದು ನಗರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ದೇವರಲ್ಲಿ ಪ್ರಾರ್ಥಿಸಿದರು. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ದೇವರಿಗೆ ಪೂಜೆ ಸಲ್ಲಿಸಿದರು. ವಿಜ್ಞಾನಿಗಳು, ಇಸ್ರೋ ಸಂಸ್ಥೆ ಪರವಾಗಿ ಘೋಷಣೆ ಕೂಗಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 23, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment