ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಇಸ್ರೋದ ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ಜಿಲ್ಲೆಯಾದ್ಯಂತ ಜನರು ಹಾರೈಸಿದ್ದಾರೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್ಲೆಲ್ಲಿ ಪೂಜೆ, ಪ್ರಾರ್ಥನೆ ನಡೆಯುತ್ತಿದೆ?
ಸಿಗಂದೂರು ದೇವಿ ಸನ್ನಿಧಿಯಲ್ಲಿ ಹೋಮ
ಸಿಗಂದೂರು : ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇಸ್ರೋ ವಿಜ್ಞಾನಿಗಳ ಅಹೋರಾತ್ರಿ ಪರಿಶ್ರಮಕ್ಕೆ ಫಲ ಸಿಗಲಿ, ಇದರೊಂದಿಗೆ ಭಾರತದ ಕೀರ್ತಿ ಇನ್ನಷ್ಟು ಹೆಚ್ಚಲಿ ಎಂದು ಬುಧವಾರ ಬೆಳಗ್ಗೆ 9.30ರಿಂದ ದುರ್ಗಾ ಸಪ್ತಶತಿ ಪಾರಾಯಣ, ಚಂಡಿಕಾ ಹೋಮ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್.ಹೆಚ್.ಆರ್, ವ್ಯವಸ್ಥಾಪಕ ಪ್ರಕಾಶ್ ಭಂಡಾರಿ, ದೇವಸ್ಥಾನದ ಸಿಬ್ಬಂದಿ ಹಾಗೂ ಭಕ್ತರು ಹಾಜರಿದ್ದರು.
ಇದನ್ನೂ ಓದಿ – ಇನ್ಮುಂದೆ ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಸ್ಟಾಪ್ ಕೊಡಲಿವೆ 4 ಎಕ್ಸ್ಪ್ರೆಸ್ ರೈಲುಗಳು, ಯಾವ ರೈಲು? ಟೈಮಿಂಗ್ ಏನು?
ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ
ಸಾಗರ : ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇರುವ ಹಜರತ್ ಸೈಯದ್ ರಾಜ್ ಬಕ್ಷ್ ವಲಿ ಅಲ್ಲಾಹ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಮಂಗಳವಾರ ಸಂಜೆ ಮಘರೀಬ್ ನಮಾಜ್ ನಂತರ ಮುಸ್ಲಿಂ ಸಮುದಾಯದವರು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದರ್ಗಾ ಸಮಿತಿಯ ಅಧ್ಯಕ್ಷ ಅಕ್ಬರ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಪ್ರಾರ್ಥನೆ ಆಗಿದ್ದು ಮೌಲಾನ ಮೊಹಮ್ಮದ್ ಅಶ್ರಫ್ ರಜಾ ಅಶ್ರಫಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಯ್ಯದ್ ನಿಯಾಝ್, ಜಮೀಲ್ ಸಾಗರ್, ಸಮೀವುಲ್ಲಾ, ಅಕ್ರಮ್, ರಶೀದ್, ನಜೀರ್ ಹಾಗೂ ಇನ್ನಿತರರು ಹಾಜರಿದ್ದರು.
ಗಣಪತಿಗೆ ಮೇಯರ್ ನೇತೃತ್ವದಲ್ಲಿ ಪೂಜೆ
ಶಿವಮೊಗ್ಗ : ಮಹಾನಗರ ಪಾಲಿಕೆ ಆವರಣದಲ್ಲಿರುವ ವರಪ್ರದ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮೇಯರ್ ಶಿವಕುಮಾರ್ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಉಪ ಮೇಯರ್, ಪಾಲಿಕೆ ಸದಸ್ಯರು, ಸಿಬ್ಬಂದಿ ಸೇರಿ ಹಲವರು ಇದ್ದರು.
ಯೋಗಪಟುಗಳಿಂದ ವಿಜ್ಞಾನಿಗಳಿಗೆ ಶುಭ ಹಾರೈಕೆ
ಶಿವಮೊಗ್ಗ : ಶಿವಗಂಗಾ ಯೋಗ ಕೇಂದ್ರದ ಯೋಗಪಟುಗಳು ಚಂದ್ರಯಾನ ಯಶಸ್ವಿಯಾಗಲು ಶುಭ ಹಾರೈಸಿದ್ದಾರೆ. ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಎಲ್ಲಾ ಯೋಗಪಟುಗಳು ಇಸ್ರೋ ಸಂಸ್ಥೆಯ ವಿಜ್ಞಾನಿಗಳಿಗೆ ಹಾಗೂ ವಿಶೇಷವಾಗಿ ಶಿವಮೊಗ್ಗದ ವಿಜ್ಞಾನಿಗಳಾದ ಪುಟ್ಟಮ್ಮ ಶಿವಾನಿ ಹಾಗೂ ಚೈತ್ರ ಅವರಿಗೆ ವಿಶೇಷ ಧನ್ಯವಾದ ಅರ್ಪಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಹಾರೈಕೆ
ಶಿವಮೊಗ್ಗ : ಚಂದ್ರಯಾನ 3 ಯಶಸ್ವಿಯಾಗಲಿ ಎಂದು ನಗರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ದೇವರಲ್ಲಿ ಪ್ರಾರ್ಥಿಸಿದರು. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ದೇವರಿಗೆ ಪೂಜೆ ಸಲ್ಲಿಸಿದರು. ವಿಜ್ಞಾನಿಗಳು, ಇಸ್ರೋ ಸಂಸ್ಥೆ ಪರವಾಗಿ ಘೋಷಣೆ ಕೂಗಿದರು.