ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇವತ್ತು ಭೂಮಿ ಪೂಜೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು.
ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀ ರಾಮತಾರಕ ಹೋಮ ನಡೆಸಲಾಯಿತು. ಬೆಳಗ್ಗೆಯಿಂದಲೇ ಸಂಘ ಪರಿವಾರದ ಕಾರ್ಯಕರ್ತರು, ಕರ ಸೇವೆಯಲ್ಲಿ ಭಾಗವಹಿಸಿದ್ದವರು ಹೋಮದಲ್ಲಿ ಪಾಲ್ಗೊಂಡಿದ್ದರು.
ಸಂಸದ, ಸಚಿವರು ಭೇಟಿ
ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿಶೇಷ ಪೂಜೆ ಮತ್ತು ಹೋಮದಲ್ಲಿ ಭಾಗವಹಿಸಿದ್ದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುಟುಂಬದ ಸಹಿತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ರಾಮ ಮಂದಿರ ನಿರ್ಮಾಣ ಕಾರ್ಯ ಸುಗಮವಾಗಿ ನೆರವೇರಲಿ ಎಂದು ಪ್ರಾರ್ಥಿಸಿದರು.
ಆರ್‍ಎಸ್‍ಎಸ್‍ನಿಂದ ಬ್ಯಾಂಡ್
ಹೋಮದ ಬಳಿಕ ಆರ್‍ಎಸ್‍ಎಸ್ ಕಾರ್ಯಕರ್ತರು ಬ್ಯಾಂಡ್ ಬಾರಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/610629589857679/?t=66
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422