ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಅಂಗವಾಗಿ ಮಾರ್ಚ್‌ 2ರಂದು ಶಿವಮೊಗ್ಗ ಹಾಗೂ ಸೊರಬ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು (special programs) ಆಯೋಜಿಸಲಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌.ಪ್ರಸನ್ನ ಕುಮಾರ್‌, ಸಚಿವರ ಜನ್ಮದಿನವನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಸಮಾಜದ ವಿವಿಧ ವರ್ಗದವರನ್ನು ಒಳಗೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಏನೇನೆಲ್ಲ ಕಾರ್ಯಕ್ರಮ ಇರಲಿದೆ?

ಅಂದು ಬೆಳಗ್ಗೆ 8 ಗಂಟೆಗೆ ಸಚಿವ ಮಧು ಬಂಗಾರಪ್ಪ ಸೊರಬದ ಕುಬಟೂರು ನಿವಾಸದಲ್ಲಿ ಜನ್ಮದಿನಾಚರಣೆ ಮಾಡಿಕೊಳ್ಳಲಿದ್ದಾರೆ. ಬೆಳಗ್ಗೆ 10.30ಕ್ಕೆ ಸೊರಬದ ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಸೊರಬದ ಬುದ್ಧಿಮಾಂದ್ಯ ಮಕ್ಕಳಿಗೆ ಸಿಹಿ ಹಂಚಿಕೆ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿದೆ. ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಗುವುದು ಎಂದರು.

Congress-President-R-Prasanna-Kumar-Press-meet-about-Madhu-Bangarappa-birthday

ಇದೇ ವೇಳೆ ಸೊರಬದ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ರಕ್ತದಾನ ಶಿಬಿರ, ಕಾಂಗ್ರೆಸ್‌ ಮುಖಂಡರಿಂದ ವಿವಿಧ ದೇವಸ್ಥಾನಗಳಲ್ಲಿ ಸಚಿವರ ಹೆಸರಿನಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಸನ್ನ ಕುಮಾರ್‌ ತಿಳಿಸಿದರು.

ಇದನ್ನೂ ಓದಿ – ನಾಳೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ, ಕಾರಣವೇನು?

ಶಿವಮೊಗ್ಗದಲ್ಲಿ ಕಾರ್ಯಕ್ರಮ

ಅಂದು ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಸುಮಾರು ಪೌರಕಾರ್ಮಿಕರಿಗೆ ಉಡುಗೊರೆ ನೀಡಿ ಗೌರವಿಸಲಾಗುತ್ತದೆ. ಅಲ್ಲಿಯೇ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ.

Press meet about Minister Madhu Bangarappa Birthday

ವಿದ್ಯಾರ್ಥಿಗಳಿಗೆ ವಿಮಾನ ಯಾನ

ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಸೊರಬ ತಾಲೂಕಿನ 35 ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ವಿಮಾನಯಾನದ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗದಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದೊಯ್ದು ಅಲ್ಲಿ ನಡೆಯುವ ಸಚಿವರ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಹಾಗೆಯೇ ಸೊರಬದ ಪೌರಕಾರ್ಮಿಕರನ್ನು ರೈಲಿನ ಮೂಲಕ ಬೆಂಗಳೂರಿಗೆ ಕರೆದೊಯ್ದು, ವಾಪಸ್ ವಿಮಾನದಲ್ಲಿ ಕರೆತರುವ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಸನ್ನ ಕುಮಾರ್‌ ತಿಳಿಸಿದರು.

Press meet about Minister Madhu Bangarappa Birthday

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ್‌, ಜಿ.ಡಿ.ಮಂಜುನಾಥ್‌, ರಮೇಶ್‌ ಶಂಕರಘಟ್ಟ, ಶ್ವೇತಾ ಬಂಡಿ, ವಿಜಯ್‌ ಕುಮಾರ್‌ ಸೇರಿ ಹಲವರು ಇದ್ದರು.

number-1-advt-copy-new.webp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment