ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 NOVEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕುಂಸಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷೆ
KUMSI : ಕುಂಸಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಪುಷ್ಪಾ ವಿಶ್ವನಾಥ ಜೆಟ್ಟಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಾಹಿದಾ ಬೇಗಂ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪುಷ್ಪಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ನೂತನ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದೆ.
ವಿಜಯೇಂದ್ರ ಆಯ್ಕೆ ಸರಿ : ಅಶೋಕ್ ನಾಯ್ಕ್
HOLEHONNURU : ಯುವಶಕ್ತಿಯನ್ನು ಒಗ್ಗೂಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಸರಿಯಾದ ಆಯ್ಕೆ ಎಂದು ಮಾಜಿ ಶಾಸಕ ಕೆ.ಬಿ.ಅಶೋಕನಾಯ್ಕ ತಿಳಿಸಿದರು. ವಿಜಯೇಂದ್ರಗೆ ನಾಯಕತ್ವದ ಗುಣ ರಕ್ತಗತವಾಗಿದೆ. ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ ಮತ್ತು ಪಾಲಿಕೆ ಚುನಾವಣೆಯಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಜೊತೆಗೆ ತಳಮಟ್ಟದಿಂದ ಸಂಘಟನೆ ಬಲಿಷ್ಠಗೊಳಿಸುವ ಸಂಘಟನಾ ಚುತುರತೆ ವಿಜಯೇಂದ್ರಗೆ ಇದೆ ಎಂದು ತಿಳಿಸಿದರು.
ಇದನ್ನೂ ಓದಿ- ಫ್ರೀಡಂ ಪಾರ್ಕ್ ಪಟಾಕಿ ಅಂಗಡಿಗಳಲ್ಲಿ ಕಾರ್ಮಿಕ ಇಲಾಖೆಯಿಂದ ತಪಾಸಣೆ, ಜಾಗೃತಿ
ಕುಮದ್ವತಿ ಎ ತಂಡಕ್ಕೆ ಮೊದಲ ಬಹುಮಾನ
SHIKARIPURA : ಶಾಸಕ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬದ ಅಂಗವಾಗಿ ಈಚಗೆ ಆಯೋಜಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿಯಲ್ಲಿ ಕುಮದ್ವತಿ (ಎ) ತಂಡ ಪ್ರಥಮ ಸ್ಥಾನ ಪಡೆದಿದೆ. ಕುಮದ್ವತಿ (ಬಿ) ತಂಡ ದ್ವಿತೀಯ ಹಾಗೂ ನಳ್ಳಿನಕೊಪ್ಪ (ಎ) ತಂಡ ತೃತೀಯ ಬಹುಮಾನ ಪಡೆಯಿತು. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದರು. ಬಿಜೆಪಿ ಯುವ ಮೋರ್ಚಾ ಹಾಗೂ ವಿಜಯೇಂದ್ರ ಅಭಿಮಾನಿಗಳ ಬಳಗದಿಂದ ಟೂರ್ನಿ ಆಯೋಜಿಸಲಾಗಿತ್ತು.
ಲೈಂಗಿಕ ಕಿರುಕುಳ, ಯುವಕನ ವಿರುದ್ಧ ದೂರು
HOLEHONNURU : ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಹೊಳೆಹೊನ್ನೂರು ಸಮೀಪದ ಗ್ರಾಮವೊಂದರ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕೃತ್ಯಕ್ಕೆ ಸಹಕರಿಸುತ್ತಿದ್ದ ಯುವಕನ ಸಹೋದರನ ವಿರುದ್ಧವೂ ದೂರು ದಾಖಲಾಗಿದೆ. ಯುವತಿಯನ್ನು ನಿತ್ಯ ಅಡ್ಡಗಟ್ಟಿ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಜೈಲ್ ರಸ್ತೆ ಕರ್ಮಕಾಂಡ, 6 ತಿಂಗಳಿಗು ಹೆಚ್ಚು ಕಾಲ ನಡೆಯಿತು ಕಾಮಗಾರಿ, ಕೆಲವೇ ತಿಂಗಳಲ್ಲಿ ಬಿತ್ತು ಗುಂಡಿ
ಖಾಲಿ ಹುದ್ದೆಗೆ ಅರ್ಜಿ ಆಹ್ವಾನ
SHIMOGA : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾ ಬಾಲ ಭವನದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಅರ್ಹರನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಯಲ್ಲಿ ಅರ್ಜಿ ಪಡೆದು ನ.29 ರೊಳಗೆ ಸಲ್ಲಿಸಬೇಕು. ಮಾಹಿತಿಗೆ ದೂರವಾಣಿ ಸಂಖ್ಯೆ: 08182-295514 ಸಂಪರ್ಕಿಸಬಹುದು.