ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 22 SEPTEMBER 2024 : ಸ್ಪೈಸ್ ಜೆಟ್ (SPICE JET) ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್ ಮತ್ತು ಶಿವಮೊಗ್ಗ – ಚೆನ್ನೈ ಮಧ್ಯೆ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ. ಈಗಾಗಲೆ ಟಿಕೆಟ್ ಬುಕಿಂಗ್ ಆರಂಭವಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಟೈಮಿಂಗ್ ಏನು?
» ಚೆನ್ನೈನಿಂದ ಬೆಳಗ್ಗೆ 10.40ಕ್ಕೆ ಹೊರಟು ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದ ತಲುಪಲಿದೆ.
» ಶಿವಮೊಗ್ಗದಿಂದ ಮಧ್ಯಾಹ್ನ 12.35ಕ್ಕೆ ಹೊರಟು ಮಧ್ಯಾಹ್ನ 2.05ಕ್ಕೆ ಹೈದರಾಬಾದ್ ತಲುಪಲಿದೆ.
» ಹೈದರಾಬಾದ್ನಿಂದ ಮಧ್ಯಾಹ್ನ 2.40ಕ್ಕೆ ಹೊರಟು ಸಂಜೆ 4.10ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಲಿದೆ.
» ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು ಸಂಜೆ 5.55ಕ್ಕೆ ಚೆನ್ನೈ ನಿಲ್ದಾಣ ತಲುಪಲಿದೆ ಎಂದು ಸದ್ಯ ಸ್ಪೈಸ್ ಜೆಟ್ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಟಿಕೆಟ್ ಬುಕಿಂಗ್ ಹೇಗೆ?
ಪ್ರಯಾಣಿಕರು ಸ್ಪೈಸ್ ಜೆಟ್ ವಿಮಾನ ಸಂಸ್ಥೆಯ ವೆಬ್ಸೈಟ್ನಲ್ಲಿ ನೇರವಾಗಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದಾಗಿದೆ. ಇಲ್ಲವಾದಲ್ಲಿ ಶಿವಮೊಗ್ಗದಲ್ಲಿ ಟ್ರಾವೆಲ್ ಏಜೆನ್ಸಿಗಳ ಮೂಲಕವು ಟಿಕೆಟ್ ಬುಕ್ ಮಾಡಿಕೊಳ್ಳಬಹುದಾಗಿದೆ. ಶಿವಮೊಗ್ಗದ ಬ್ಲೂ ಬೆಲ್ ಹಾಲಿಡೇಸ್ ಮೂಲಕ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿ ಮತ್ತು ಟಿಕೆಟ್ ಬುಕ್ ಮಾಡಲು ಮೊಬೈಲ್ ನಂಬರ್ 8123002917 ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ » ಶಿವಮೊಗ್ಗಕ್ಕೆ ಬರ್ತಿದ್ದಾರೆ ರೈಲ್ವೆ ಮಿನಿಸ್ಟರ್, ನಡೆಯಲಿದೆ ಮಹತ್ವದ ಸಭೆ