ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 21 SEPTEMBER 2024 : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆ (Spice Jet) ಸೇವೆ ಆರಂಭಿಸಲು ನಿರ್ಧರಿಸಿದೆ. ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದಿಂದ ಎರಡು ಮಾರ್ಗಕ್ಕೆ ಟಿಕೆಟ್ ಬುಕಿಂಗ್ ಆರಂಭಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗಕ್ಕೆ ಸ್ಪೈಸ್ ಜೆಟ್ ಎಂಟ್ರಿ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನಗಳು ಹಾರಾಟ ನಡೆಸಲಿದೆ. ಅಕ್ಟೋಬರ್ 10ರಿಂದ ಎರಡು ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲಿದೆ. ತನ್ನ ವೆಬ್‌ಸೈಟ್‌ನಲ್ಲಿ ಸ್ಪೈಸ್ ಜೆಟ್ ಟಿಕೆಟ್ ಬುಕಿಂಗ್ ಅರಂಭಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎರಡು ಮಾರ್ಗದಲ್ಲಿ ವಿಮಾನಯಾನ
ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದಿಂದ ಎರಡು ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿದೆ ಎಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಶಿವಮೊಗ್ಗದಿಂದ ಹೈದರಾಬಾದ್ ಮತ್ತು ಶಿವಮೊಗ್ಗದಿಂದ ಚೆನ್ನೈ ಮಾರ್ಗದಲ್ಲಿ ವಿಮಾನಗಳು ಹಾರಾಟ ನಡೆಸಲಿವೆ. ಇದಕ್ಕೆ ಈಗಾಗಲೇ ಸಿದ್ಧತೆಗಳು ಅರಂಭವಾಗಿದ್ದು, ಟಿಕೆಟ್ ಬುಕ್ಕಿಂಗ್ ಸರ್ವಿಸ್ ಶುರುವಾಗಿದೆ.
ಶಿವಮೊಗ್ಗದಿಂದ ಈವರೆಗೂ ಬೆಂಗಳೂರು, ಹೈದರಾಬಾದ್, ತಿರುಪತಿ, ಗೋವಾಗೆ ವಿಮಾನ ಹಾರಾಟ ನಡೆಸುತ್ತಿವೆ. ಇಂಡಿಗೋ ಮತ್ತು ಸ್ಟಾರ್ ಏರ್ ಲೈನ್ ವಿಮಾನಗಳು ಮಾತ್ರ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕಾರ್ಯಾಚರಿಸುತ್ತಿವೆ. ಈಗ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಸೇವೆ ಒದಗಿಸಲು ಸಿದ್ಧತೆ ನಡೆಸಿದೆ.
ಇದನ್ನೂ ಓದಿ » ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?