ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 DECEMBER 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ ಸ್ಥಾಪನೆ, ನೆಹರು ಸ್ಟೇಡಿಯಂನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ಅನುದಾನ ಬಿಡುಗಡೆ ಮಾಡುತ್ತಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ, ಕ್ರೀಡೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಕ್ರೀಡಾ ಗ್ರಾಮ ಸ್ಥಾಪಿಸಲಾಗುತ್ತದೆ. ಉತ್ತಮ ಕೋಚುಗಳು ಕೂಡ ಶಿವಮೊಗ್ಗಕ್ಕೆ ಬರಲು ಸಾದ್ಯವಾಗುತ್ತದೆ. ಕ್ರೀಡಾಪಟುಗಳಿಗೆ ಉತ್ತಮ ಕೋಚಿಂಗ್ ಸಿಗಲಿದೆ ಎಂದರು.
ಪ್ರತಿ ತಾಲೂಕಲ್ಲೂ ಒಳ ಕ್ರೀಡಾಂಗಣ
ಶಿವಮೊಗ್ಗ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಒಳ ಕ್ರೀಡಾಂಗಣದ ಸ್ಥಾಪನೆಗೆ ನಿರ್ಧರಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೂ ಪ್ರೋತ್ಸಾಹ ಸಿಗಲಿದೆ ಎಂದು ರಾಘವೇಂದ್ರ ತಿಳಿಸಿದರು.
ಕೇಂದ್ರ ತಂಡದಿಂದ ಪರಿಶೀಲನೆ
ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ ಸ್ಥಾಪನೆ ಸಂಬಂಧ ಪರಿಶೀಲನೆಗೆ ಕೇಂದ್ರ ತಂಡವೊಂದು ಶಿವಮೊಗಕ್ಕೆ ಆಗಮಿಸಿದೆ. ಈ ಅಧಿಕಾರಿಗಳ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಸಭೆ ನಡೆಸಿದರು.
ಕ್ರೀಡಾ ಗ್ರಾಮ ಅಂದರೇನು? ಎಲ್ಲಿ ಆಗುತ್ತೆ? ವಿಡಿಯೋ ರಿಪೋರ್ಟ್ ನೋಡಿ
ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]