ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

Published On : ಮಾರ್ಚ್ 27, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಗರದ ಎಂಬಿಸಿ (MBC) ತಂಡದ ವತಿಯಿಂದ ಆಯೋಜಿಸಲಾಗಿರುವ ಕಾಂತಣ್ಣ ಕಪ್ ಕ್ರಿಕೆಟ್ (cricket) ಪಂದ್ಯಾವಳಿಯ ಟ್ರೋಫಿ ಹಾಗೂ ಟೀ-ಶರ್ಟ್‌ಗಳನ್ನು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಅವರು ನಗರದ ಮಥುರಾ ಹೋಟೆಲ್‌ನಲ್ಲಿ ಬಿಡುಗಡೆಗೊಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ ಬಿ.ಎಸ್‌.ಚನ್ನಬಸಪ್ಪ ಅಂಡ್‌ ಸನ್ಸ್‌ ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಕಾರ್ಯಕ್ರಮದಲ್ಲಿ ಮಾತನಾಡಿದ ಎಂ. ಶ್ರೀಕಾಂತ್ ಅವರು, ಸೇವೆಯೇ ಪರಮಧರ್ಮ ಎಂಬ ತತ್ವದಡಿ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದೇನೆ. ಕ್ರೀಡೆಯು ಮನಸ್ಸಿಗೆ ಚೇತೋಹಾರಿ ಮಾತ್ರವಲ್ಲದೆ, ವಿವಿಧ ಸಮುದಾಯಗಳನ್ನು ಒಂದೆಡೆ ಸೇರಿಸುವ ಶಕ್ತಿ ಹೊಂದಿದೆ. ಕಳೆದ ಬಾರಿ 7 ಸಮುದಾಯಗಳ 12 ತಂಡಗಳು ಭಾಗವಹಿಸಿದ್ದವು. ಆದರೆ ಈ ಬಾರಿ 13 ಸಮುದಾಯಗಳ 19 ತಂಡಗಳು ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸದ ವಿಚಾರ ಎಂದರು.

Srikanthanna-Cup-Cricket-trophy-released.

ಬಹುಮಾನಗಳ ವಿವರ

ನಗರದ ಎನ್‌.ಇ.ಎಸ್‌ ಮೈದಾದನಲ್ಲಿ ಮಾರ್ಚ್‌ 28 ಮತ್ತು 29ರಂದು ಶ್ರೀಕಾಂತಣ್ಣ ಕಪ್‌ ಸೀಸನ್‌ 3 ಪಂದ್ಯಾವಳಿಗಳು ನಡೆಯಲಿವೆ. ವಿಜೇತರಾಗುವ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನ ₹55,555 ನಗದು ಹಾಗೂ ಆಕರ್ಷಕ ಟ್ರೋಫಿ. ದ್ವಿತೀಯ ಬಹುಮಾನ ₹33,333 ನಗದು ಹಾಗೂ ಆಕರ್ಷಕ ಟ್ರೋಫಿ. ತೃತೀಯ ಬಹುಮಾನ ಆಕರ್ಷಕ ಟ್ರೋಫಿ ಇರಲಿದೆ.

Sunrise Facility Services, Sri sai Trust Shimoga

ಇನ್ನು, ಈ ಬಾರಿಯ ಪಂದ್ಯಾವಳಿಯಲ್ಲಿ ಪ್ರೇಕ್ಷಕರಿಗಾಗಿ ಲಕ್ಕಿ ಡಿಪ್ ಆಯೋಜಿಸಲಾಗಿದೆ. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಕುರಿ, ದ್ವಿತೀಯ ಬಹುಮಾನವಾಗಿ ಸೈಕಲ್ ಹಾಗೂ ತೃತೀಯ ಬಹುಮಾನವಾಗಿ ಕ್ರಿಕೆಟ್ ಬ್ಯಾಟ್ ನೀಡಲಾಗುವುದು. ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪಮೇಯರ್ ಪಾಲಾಕ್ಷಿ, ಭಾವಸಾರ ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮಾಳೋದೆ, ಪತ್ರಕರ್ತ ಗೋ.ವ. ಮೋಹನಕೃಷ್ಣ ಹಾಗೂ ಎಂಬಿಸಿ ತಂಡದ ವಿನಯ್ ತಾಂದ್ಲೆ, ಮಂಜು ಬೇದ್ರೆ ಮತ್ತಿತರರು ಉಪಸ್ಥಿತರಿದ್ದರು.

Srikanthanna-Cup-Cricket-trophy-released.
number-1-advt-copy-new.webp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 27, 2026

Leave a Comment