SHIVAMOGGA LIVE NEWS | 29 ಮಾರ್ಚ್ 2022
ಕಾರ್ಯಕರ್ತರು ಪಕ್ಷದ ಆಸ್ತಿ ಎಂದು ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಹೇಳಿದರು.
ಜೆಡಿಎಸ್ ಕಾರ್ಯಾಲಯದಲ್ಲಿ ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚಿರಋಣಿ ಎಂದರು.
ಮುಂದಿನ ದಿನಗಳಲ್ಲಿಯೂ ಪಕ್ಷ ಹಾಗೂ ತಮ್ಮ ಮೇಲೆ ಇದೇ ರೀತಿ ಪ್ರೀತಿ, ವಿಶ್ವಾಸ ಹೊಂದಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಮಾತನಾಡಿ, ಶ್ರೀಕಾಂತ್ ಅವರು ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸದೃಢವಾಗಲು ಎಂ.ಶ್ರೀಕಾಂತ್ ಅವರ ಕೊಡುಗೆ ಸಾಕಷ್ಟಿದೆ ಎಂದರು.
ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಸದೃಢವಾಗಬೇಕು. ಈ ದಿಕ್ಕಿನಲ್ಲಿ ಪ್ರಯತ್ನ ನಡೆಯಬೇಕಿದೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಂ.ಶ್ರೀಕಾಂತ್ ಅವರ ಜನ್ಮದಿಂದ ಪ್ರಯುಕ್ತ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ಕಾಂತರಾಜ, ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಸತ್ಯನಾರಾಯಣ, ನರಸಿಂಹ ಗಂಧದ ಮನೆ, ತ್ಯಾಗರಾಜ, ರಾಜಣ್ಣ, ಶಾಂತ ಸುರೇಂದ್ರ, ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200