ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯ ಶ್ರೀರಾಮನವಮಿ, ಕೋಟೆ ದೇಗುಲದಲ್ಲಿ ಹೋಮ, ಪೂಜೆ

SHIVAMOGGA LIVE NEWS | 17 APRIL 2024

SHIMOGA : ಶ್ರೀರಾಮ ನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಶಿವಮೊಗ್ಗ ನಗರದ ವಿವಿಧೆಡೆ ಶ್ರೀರಾಮನ ದೇಗುಲಗಳಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಎಲ್ಲೆಡೆ ಪಾನಕ, ಮಜ್ಜಿಗೆ, ಕೋಸಂಬರಿ ಹಂಚಲಾಗುತ್ತಿದೆ.

ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಲ್ಲಿ ಶ್ರೀರಾಮ ನವಮಿ ಅಂಗವಾಗಿ ವಿಶೇಷ ಪೂಜೆ, ಹೋಮ ನಡೆಸಲಾಯಿತು. ದೇವರಿಗೆ ಶ್ವೇತ ವಸ್ತ್ರದಿಂದ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದ ಭಕ್ತರು ದೇಗುಲಕ್ಕೆ ಆಗಮಿಸಿದ ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ.

ಇನ್ನು, ನಗರದ ವಿವಿಧೆಡೆ ವಿವಿಧ ಸಂಘಟನೆಗಳು, ಭಕ್ತರು ಶ್ರೀರಾಮ ನವಮಿ ಅಂಗವಾಗಿ ಪಾನಕ, ಮಜ್ಜಿಗೆ, ಕೋಸಂಬರಿ ಹಂಚುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಬಿಸಿಲಿನ ತಾಪ, ಇವತ್ತು ಎಷ್ಟಿರುತ್ತೆ ಉಷ್ಣಾಂಶ

Srirama-Navami-in-Shimoga-Kote-temple.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment