ಇನ್ನೂ ಆರೇಳು ತಿಂಗಳು ಕರೋನದೊಂದಿಗೆ ಬದುಕಲು ಸಿದ್ಧವಾಗಿ, ಶಿವಮೊಗ್ಗದಲ್ಲಿ ಆರೋಗ್ಯ ಸಚಿವರ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರೋನಾ ಜಿಲ್ಲೆಗೆ ಕಾಲಿರಿಸಿಲ್ಲ. ಆದರೆ ಈ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಕರೋನಾ ವಿರುದ್ಧ ದೀರ್ಘಕಾಲೀನ ಹೋರಾಟ ನಡೆಸಬೇಕಾಗಿದ್ದು,  ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಾ ಇನ್ನೂ 6-7 ತಿಂಗಳ ಕಾಲ ಕರೋನಾದೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ ಎಂದು ಸಚಿವರು ಹೇಳಿದರು.

ಕರೋನ ನಿಯಂತ್ರಣ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಕರೋನಾ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಪ್ರಸ್ತುತ ಕ್ಲಿನಿಕಲ್ ಟೆಸ್ಟಿಂಗ್ ಹಂತದಲ್ಲಿದ್ದು, ಯಶಸ್ವಿಯಾದರೆ ಎಲ್ಲಾ ಜಿಲ್ಲೆಗಳಲ್ಲಿ ಅದನ್ನು ಚಿಕಿತ್ಸೆಗಾಗಿ ಅನುಸರಿಸಲಾಗುವುದು ಎಂದರು.

ಎಲ್ಲಾ ಜಿಲ್ಲೆಗಳಲ್ಲಿರುವ ಬ್ಲಡ್ ಬ್ಯಾಂಕ್‍ಗಳಲ್ಲಿ ರಕ್ತ ಸಂಗ್ರಹ ಕಡಿಮೆಯಾಗುತ್ತಿದ್ದು, ರಕ್ತ ನೀಡಲು ದಾನಿಗಳು ಮುಂದೆ ಬರಬೇಕು. ಇದಕ್ಕಾಗಿ ಜಿಲ್ಲೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕರೋನಾ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಿ, ಲಾಕ್‍ಡೌನ್ ಅವಧಿಯಲ್ಲಿ 842 ವಲಸೆ ಕಾರ್ಮಿಕರಿಗೆ ಜಿಲ್ಲೆಯ 20 ಕಡೆಗಳಲ್ಲಿ ವಸತಿ ಕಲ್ಪಿಸಲಾಗಿದೆ. ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಅವರನ್ನು ಸ್ವಂತ ಊರುಗಳಿಗೆ ಕಳುಹಿಸಲಾಗುತ್ತಿದೆ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2020

Leave a Comment