ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 ಮಾರ್ಚ್ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯುತ್ತಿದೆ. ವಿವಾದಗಳನ್ನು ಪಕ್ಕಕ್ಕಿಟ್ಟು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದ ವಿದ್ಯಾರ್ಥಿನಿಯ ಮನವೊಲಿಸಲಾಗಿದೆ.
ಜಿಲ್ಲೆಯಾದ್ಯಂತ 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. 24,381 ವಿದ್ಯಾರ್ಥಿಗಳು ಇವತ್ತು ಪರೀಕ್ಷೆ ಎದುರಿಸುತ್ತಿದ್ದಾರೆ.
ಹಿಜಾಬ್ ವಿವಾದದ ಬೆನ್ನಿಗೆ
ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಹೈಕೋರ್ಟ್ ತೀರ್ಪು ನೀಡುತ್ತು. ಆ ನಂತರವು ಹಿಜಾಬ್ ಪರ ವಿದ್ಯಾರ್ಥಿನಿಯರು ಹೋರಾಟ ಮುಂದುವರೆಸಿದ್ದರು. ಇದರ ಬೆನ್ನಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಿಕ್ಷಣ ಇಲಾಖೆ ಈಗಾಗಲೇ ತಿಳಿಸಿತ್ತು. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ತಿಳಿವಳಿಕೆ ಮೂಡಿಸಿದ್ದರು.
ವಿದ್ಯಾರ್ಥಿನಿ ಮನವೊಲಿಸಿ ಪರೀಕ್ಷೆ
ಹಿಜಾಬ್ ಧರಿಸಲು ಅವಕಾಶ ಕಲ್ಪಿಸದ ಹಿನ್ನೆಲೆ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದಳು. ಶಿವಮೊಗ್ಗದ ಕಸ್ತೂರ ಬಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಹಿಜಾಬ್ ಧರಿಸಲು ಅವಕಾಶ ನೀಡದಿದ್ದ ಹಿನ್ನೆಲೆ ವಿದ್ಯಾರ್ಥಿನಿಯು ಪೋಷಕರೊಂದಿಗೆ ಮನೆಗೆ ಮರಳುತ್ತಿದ್ದಳು. ಈ ವೇಳೆ ಶಿಕ್ಷಕರು ವಿದ್ಯಾರ್ಥಿನಿ ಮತ್ತು ಪೋಷಕರ ಮನವೊಲಿಸಿದ್ದಾರೆ. ನಂತರ ವಿದ್ಯಾರ್ಥಿನಿ ಹಿಜಾಬ್ ತೆಗೆದಿಟ್ಟು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ್ದಾಳೆ.
ಡಿಡಿಪಿಐ ಏನಂತಾರೆ?
ಇನ್ನು, ಪರೀಕ್ಷಾ ಸಿದ್ಧತೆ ಕುರಿತು ಡಿಡಿಪಿಐ ಎನ್.ಎಂ.ರಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 94 ಪರೀಕ್ಷಾ ಕೇಂದ್ರದಲ್ಲಿಯು ಸುಗಮನವಾಗಿ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ 25 ಸಾವಿರ ಮಾಸ್ಕ್ ವಿತರಣೆ ಮಾಡಲಾಗಿದೆ. ಹಾಸನದಿಂದ ಉಪ ನಿರ್ದೇಶಕರಾದ ಪುಟ್ಟರಾಜು ಅವರನ್ನು ವೀಕ್ಷಕರಾಗಿ ಆಗಮಿಸಿದ್ದಾರೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ. ಹಿಜಾಬ್ ಸಂಬಂಧ ಒಬ್ಬ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದರು. ಆಕೆ ಪುನಃ ಬಂದು ಪರೀಕ್ಷೆ ಬರೆಯುತ್ತಿದ್ದಾರೆ. ಉಳಿದಂತೆ ಎಲ್ಲಿಯೂ ತೊಂದರೆ ಆಗಿಲ್ಲ ಎಂದು ಡಿಡಿಪಿಐ ಎನ್.ಎಂ.ರಮೇಶ್ ಅವರು ತಿಳಿಸಿದರು.
ಪರೀಕ್ಷಾ ಕೇಂದ್ರದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. 200 ಮೀಟರ್ ಸುತ್ತಮುತ್ತ ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422