ಪಿತೃ ಪಕ್ಷಕ್ಕೆ ಊರಿಗೆ ಹೋದ ಸ್ಟಾಫ್ ನರ್ಸ್ ಗಳ ಮನೆ ಬೀಗ ಮುರಿದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಪಿತೃ ಪಕ್ಷಕ್ಕೆ ತೆರಳಿದ್ದ ಸ್ಟಾಫ್ ನರ್ಸ್ ಗಳ (STAFF NURSE) ಮನೆಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶರಾವತಿ ನಗರದಲ್ಲಿರುವ ನರ್ಸ್ ಕ್ವಾರ್ಟರ್ಸ್ ನಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ಮೆಗ್ಗಾನ್ ಆಸ್ಪತ್ರೆಯ ಸ್ಟಾಫ್ ನರ್ಸ್ (STAFF NURSE) ಆಗಿ ಕೆಲಸ ಮಾಡುತ್ತಿರುವ ಸ್ವಾಮಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ಪಿತೃ ಪಕ್ಷದ ಪೂಜೆಗಾಗಿ ಸ್ವಾಮಿ ಅವರು ಕುಟುಂಬದೊಂದಿಗೆ ಮಂಡ್ಯ ಜಿಲ್ಲೆಯ ತಮ್ಮ ಊರಿಗೆ ತೆರಳಿದ್ದರು. ಕ್ವಾರ್ಟರ್ಸ್ ನ ಎಫ್ 6 ಬ್ಲಾಕ್ ನಲ್ಲಿರುವ ಸ್ವಾಮಿ ಅವರ ಮನೆಯ ಬೀಗ ಮುರಿದು ಕಳ್ಳತನ ಮಾಡಲಾಗಿದೆ.

47 ಸಾವಿರ ರೂ. ನಗದು ಸೇರಿ ಚಿನ್ನಾಭರಣ ಕಳ್ಳತನವಾಗಿದೆ. 2.86 ಲಕ್ಷ ರೂ. ಮೊತ್ತದ ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ದೂರು ನೀಡಲಾಗಿದೆ.

ಮತ್ತೊಂದು ಮನೆಯಲ್ಲಿ ಕಳವು

ಮತ್ತೊಬ್ಬ ಸ್ಟಾಫ್ ನರ್ಸ್ ಮಂಜು ಎಂಬುವವರ ಎಫ್4 ಬ್ಲಾಕ್ ನಲ್ಲಿರುವ ಮನೆಯಲ್ಲೂ ಕಳ್ಳತನವಾಗಿದೆ. ಮಂಜು ಅವರು ಕುಟುಂಬದೊಂದಿಗೆ ಮಂಡ್ಯದಲ್ಲಿರುವ ತಮ್ಮೂರಿಗೆ ತೆರಳಿದ್ದರು. ನಗದು, ಚಿನ್ನಾಭರಣ, ವಾಚ್ ಸೇರಿ 2.03 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳ್ಳಂಬೆಳಗ್ಗೆ ಶಿವಮೊಗ್ಗ, ಭದ್ರಾವತಿಯ ಐದು ಕಡೆ ದಾಳಿ, ಐವರು ವಶಕ್ಕೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment