ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 30 MAY 2023
SHIMOGA : ಸಚಿವರಾದ (Minister) ಮೇಲೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ಧೂರಿ ತಯಾರಿ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಮೇ 31ರಂದು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9.30ಕ್ಕೆ ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ. ಸಿಹಿ ಹಂಚಿ ಮಕ್ಕಳಿಗೆ ಸ್ವಾಗತ ಕೋರಲಿದ್ದಾರೆ. ಆ ಬಳಿಕ ಎಂ.ಆರ್.ಎಸ್. ಸರ್ಕಲ್ನಿಂದ ಅವರ ಮೆರವಣಿಗೆ ಮಾಡಲಾಗುವುದು ಎಂದು ತಿಳಿಸಿದರು.
ಬಳಿಕ ಈಡಿಗ ಸಮುದಾಯ ಭವನದಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಲಾಗುತ್ತದೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಬಿ.ಕೆ.ಸಂಗಮೇಶ್ವರ ಅವರನ್ನು ಸನ್ಮಾನಿಸಲಾಗುತ್ತದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನೂ 4 ಎಲೆಕ್ಟ್ರಿಕ್ ಬಸ್ ಸೇವೆ ಆರಂಭ, ಯಾವ್ಯಾವ ಬಸ್ಸಿನ ಟೈಮಿಂಗ್ ಏನು?
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಇಸ್ಮಾಯಿಲ್ ಖಾನ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಸದಸ್ಯೆ ಯಮುನಾ ರಂಗೇಗೌಡ, ಪ್ರಮುಖರಾದ ಚಂದ್ರಭೂಪಾಲ್, ಜಿ.ಡಿ.ಮಂಜುನಾಥ್, ಕಾಶಿ ವಿಶ್ವನಾಥ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು











