SHIVAMOGGA LIVE NEWS, 16 JANUARY 2025
ಶಿವಮೊಗ್ಗ : ನಗರದ ಪಿಇಎಸ್ ಕಾಲೇಜು, ಅನ್ವೇಷಣಾ ಇನ್ನೋವೇಷನ್ ಅಂಡ್ ಎಂಟರ್‌ಪ್ರೀನ್ಯೂರಲ್ ಫೋರಮ್ ವತಿಯಿಂದ ಜ.18ರಂದು ಮಲೆನಾಡು Start Up ಸಮ್ಮೇಳನ ಆಯೋಜಿಸಲಾಗಿದೆ. ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಪಿಇಎಸ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಸುಭಾಷ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್, ಶಿವಮೊಗ್ಗದಲ್ಲಿ ಉದ್ಯೋಗ ಸೃಷ್ಟಿ, ಸ್ವಾವಲಂಬಿತನ ರೂಪಿಸುವ ಗುರಿಯೊಂದಿಗೆ ಸ್ಟಾರ್ಟ್‌ಅಪ್ ಸಮ್ಮೇಳನ ಆಯೋಜಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಅನ್ವೇಷಣಾ ವ್ಯವಸ್ಥಾಪಕ ನಿರ್ದೇಶಕ ಸಿ.ಎಂ.ಪಾಟೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
250ಕ್ಕೂ ಹೆಚ್ಚು ಸ್ಟಾರ್ಟ್ ಅಪ್‌ಗಳು
ಪಿಇಎಸ್ ಟ್ರಸ್ಟ್‌ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ್ ಮಾತನಾಡಿ, ಕಳೆದ ವರ್ಷದ ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನದಲ್ಲಿ 1500ಕ್ಕೂ ಹೆಚ್ಚು ಆಸಕ್ತರು ಪಾಲ್ಗೊಂಡಿದ್ದರು. ಈ ಬಾರಿ 250ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಆಕಾಂಕ್ಷಿಗಳು, 400ಕ್ಕೂ ಹೆಚ್ಚು ರೈತರ ಉತ್ಪಾದಕ ಸಂಸ್ಥೆಗಳ ಸದಸ್ಯರು, ರೈತರು ಭಾಗವಹಿಸಲಿದ್ದಾರೆ. 25ಕ್ಕೂ ಹೆಚ್ಚು ಸ್ಟಾರ್ಟ್ ಅಪ್‌ಗಳು ವಿಶೇಷ ತಂತ್ರಜ್ಞಾನ ಪ್ರದರ್ಶಿಸಲಿದ್ದಾರೆ. 30ಕ್ಕೂ ಹೆಚ್ಚು ನುರಿತ ತಜ್ಞರು, ಮಾರ್ಗದರ್ಶಕರು, ಹೂಡಿಕೆದಾರರು ಭಾಗವಹಿಸಲಿದ್ದಾರೆ. ಸಾವಿರಕ್ಕು ಹೆಚ್ಚು ಯುವಕರು ಈ ಸಮ್ಮೇಳನದ ಪ್ರಯೋಜನ ಪಡೆಯಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.
ಇದನ್ನೂ » ಶಿವಮೊಗ್ಗಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ, ಮಹತ್ವದ ಸಭೆಗಳು, ಹಲವರ ಭೇಟಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200