ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 05 ಡಿಸೆಂಬರ್ 2019
ಯೋಜನೆಯನ್ನು ತ್ವರಿತಗತಿಯಿಂದ ಅನುಷ್ಟಾನಗೊಳಿಸುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆಯಿಂದ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಮಹತ್ತರ ನಿರ್ಣಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಗತ್ಯ ಮಾರ್ಪಾಡುಗಳೊಂದಿಗೆ ಶೀಘ್ರವೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿ, ಕೂಡಲೇ ರಾಜ್ಯ ಸರ್ಕಾರದಿಂದ 39 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಅದರ ಫಲವಾಗಿ, ಕೆ.ಎಸ್.ಐ.ಐ.ಡಿ.ಸಿ. ವತಿಯಿಂದ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಕಾದಂತಹ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳಲಿರುವ ಈ ವಿಮಾನ ನಿಲ್ದಾಣದಿಂದಾಗಿ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಅಲ್ಲದೇ ಪಕ್ಕದ ದಾವಣಗೆರೆ ಜಿಲ್ಲೆಯ ಜನತೆಗೂ ವಿಮಾನ ಯಾನದ ಸೌಲಭ್ಯ ದೊರಕಲಿದೆ. ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಹಕಾರಿಯಾಗುವಂತಹ ನಿರ್ಧಾರವನ್ನು ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Shimoga MP BY Raghavendra thanks Chief Minister B S Yedyurappa over decision on Sogane Airport. The State Government has handed over the airport project to PWD Department.