ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ, ನವೆಂಬರ್‌ 9ಕ್ಕೆ ಕೊನೆಯ ದಿನ

ಶಿವಮೊಗ್ಗ: ಡಿಸೆಂಬರ್ 3 ರಂದು ನಡೆಯಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ, ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ವಿಶೇಷ ಶಿಕ್ಷಕರಿಗೆ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅರ್ಜಿ ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 41 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ dwdsc.karnataka.gov.in ಮೂಲಕ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ ನಗರದ ಕಾಮಾಕ್ಷಿ ಬೀದಿಯಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳ ಕಚೇರಿಯಿಂದಲೂ ಉಚಿತವಾಗಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shimoga-News-update

ಅರ್ಜಿದಾರರು ಜಿಲ್ಲಾ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಪ್ರಮಾಣಪತ್ರಗಳ ಹಾರ್ಡ್ ಹಾಗೂ ಸಾಫ್ಟ್‌ ಕಾಪಿಯೊಂದಿಗೆ ಭರ್ತಿ ಮಾಡಿದ ಪ್ರಸ್ತಾವನೆಯನ್ನು ನವೆಂಬರ್ 9 ರೊಳಗೆ ಕಚೇರಿಗೆ ಖುದ್ದಾಗಿ ತಲುಪಿಸಬೇಕು. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08182-251676 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.