ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾವಿರ ಸಾವಿರ ಸರ್ಕಾರಿ ನೌಕರರು ವಿವಿಧ ಸ್ಪರ್ಧೆಗಳಲ್ಲಿ (competition) ಭಾಗವಹಿಸಿ ವಿಜೇತರಾಗುವತ್ತ ಗಮನ ಹರಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ತೀವ್ರ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಕ್ರೀಡಾಕೂಟ ತುಸು ರಿಲೀಫ್ ನೀಡಿದೆ. ನಾನಾ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಸಾವಿರಾರು ನೌಕರರು, ಗೆದ್ದೆ ಗೆಲ್ಲಬೇಕು ಎಂಬ ಗುರು ಹೊತ್ತು ಸ್ಪರ್ಧಗಳಲ್ಲಿ ಭಾಗವಹಿಸುತ್ತಿದ್ದಾರೆ.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣ ಸೇರಿದಂತೆ ವಿವಿಧೆಡೆ ನಾನಾ ಸ್ಪರ್ಧೆಗಳು ನಡೆಯುತ್ತಿವೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಸರ್ಕಾರಿ ನೌಕರರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.
ಸ್ಪರ್ಧೆಗಳ ಹೈಲೈಟ್ಸ್
- ಮಳೆಯ ನಡುವೆಯು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 11 ಸಾವಿರಕ್ಕೂ ಅಧಿಕ ಸರ್ಕಾರಿ ನೌಕರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.
- ನೆಹರು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಗುಂಪು ಸ್ಪರ್ಧೆಗಳಾದ ಖೋ ಖೋ, ವಾಲಿಬಾಲ್, ಥ್ರೋಬಾಲ್, ಬಾಸ್ಕೆಟ್ ಬಾಲ್, ಟೆನಿಕಾಯ್ಟ್ ನಡೆಯಿತು.
- ಕುವೆಂಪು ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಾಜ್ಯದ ವಿವಿಧೆಡೆಯ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
- ಎನ್ಇಎಸ್ ಮೈದಾನದಲ್ಲಿ ಊಟ, ಉಪಾಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡು ಪ್ರತ್ಯೇಕ ಸಭಾಂಗಣದಲ್ಲಿ 20ಕ್ಕೂ ಹೆಚ್ಚು ಕೌಂಟರ್ಗಳಲ್ಲಿ ಊಟ, ಉಪಾಹಾರ ಬಡಿಸಲಾಗುತ್ತಿದೆ.





LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





