ಶಿವಮೊಗ್ಗ : ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾ.15 ರಿಂದ 18ರವರೆಗೆ ರಾಜ್ಯಮಟ್ಟದ ಅಂತರಮಹಾವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ (Sports Meet) ಸದೃಡ 2.0 ಆಯೋಜಿಸಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ರೀಡಾಕೂಟ ನಡೆಯುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ (ಎನ್.ಇ.ಎಸ್) ಪದಾಧಿಕಾರಿಗಳು, ವ್ಯವಸ್ಥೆ ಕುರಿತು ತಿಳಿಸಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಕ್ರೀಡೆಯಿಂದ ವ್ಯಕ್ತಿತ್ವ ವಿಕಸನವಾಗಲಿದೆ. ಅದಕ್ಕಾಗಿ ಈ ಹಿಂದೆ ಸದೃಢ 1 ಆಯೋಜಿಸಿದ್ದೆವು. ಈಗ 2ನೇ ಅವೃತ್ತಿಯ ಸದೃಡ ಅಥ್ಲೆಟಿಕ್ಸ್ ಸ್ಪರ್ಧೆ ನಡೆಸಲಾಗುತ್ತಿದೆ. 220 ಕಾಲೇಜುಗಳ, 1500ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಮೂರು ದಿನ ವಿವಿಧ ಸ್ಪರ್ಧೆಗಳು ನಡೆಯಲಿದೆ. ಇದೇ ಮೊದಲ ಬಾರಿ ಇ.ಡಿ.ಎಂ ಸಾಫ್ಟ್‌ವೇರ್ ಬಳಸಿ ತೀರ್ಪು ನೀಡಲಾಗುತ್ತಿದೆ. ಅತ್ಯಂತ ಉನ್ನತ ಮಟ್ಟದ ಕ್ರೀಡಾಕೂಟ ಇದಾಗಿದೆ.
– ಜಿ.ಎಸ್.ನಾರಾಯಣರಾವ್, ಅಧ್ಯಕ್ಷ, ರಾಷ್ಟ್ರೀಯ ಶಿಕ್ಷಣ ಸಮಿತಿ
2013ರಲ್ಲಿ ಸದೃಡ 1 ಹೆಸರಿನಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಮತ್ತೊಮ್ಮೆ ಕ್ರೀಡಾಕೂಟ (Sports Meet) ಆಯೋಜನೆಗೆ ವಿ.ಟಿ.ಯು ಅನುಮತಿ ನೀಡಿದೆ. ಈಗ ಸದೃಡ 2.0 ಹೆಸರಿನಲ್ಲಿ ಕ್ರೀಡಾಕೂಟ ನಡೆಸಲಾಗುತ್ತಿದೆ. ವಿ.ಟಿ.ಯು ವ್ಯಾಪ್ತಿಯ ಜೆ.ಎನ್.ಎನ್ ಹೊರತು ಮತ್ಯಾವ ಕಾಲೇಜಿಗು ಎರಡನೆ ಬಾರಿ ಕ್ರೀಡಾಕೂಟ ಆಯೋಜಿಸಲು ಅವಕಾಶ ಲಭಿಸಿಲ್ಲ. ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯದಲ್ಲಿ ಟಾಪ್ 3ನೇ ಸ್ಥಾನದಲ್ಲಿದೆ. ಕ್ರೀಡಾಕೂಟಗಳಲ್ಲಿ ಟಾಪ್ 5ನೇ ಸ್ಥಾನದಲ್ಲಿದೆ.
– ಡಾ. ವೈ.ವಿಜಯ ಕುಮಾರ್, ಪ್ರಾಂಶುಪಾಲ, ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜು

ಸಮಾರಂಭಕ್ಕೆ ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾಪಟು
ಜೆ.ಎನ್.ಎನ್ ಕಾಲೇಜು ಆವರಣದಲ್ಲಿ ಮಾ.15ರಂದು ಬೆಳಗ್ಗೆ 9 ಗಂಟೆಗೆ ಸದೃಡ 2.0ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ವಿದ್ಯಾಶಂಕರ್.ಎಸ್ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಅರ್ಜುನ ಪ್ರಶಸ್ತಿ ವಿಜೇತ, ರಾಷ್ಟ್ರಮಟ್ಟದ ತರಬೇತುದಾರ ಎಸ್.ಡಿ.ಈಶನ್ ಭಾಗವಹಿಸಲಿದ್ದಾರೆ. ಎನ್.ಇ.ಎಸ್ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾ.18ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಭೆ ನಡೆಯಲಿದೆ. ವಿ.ಟಿ.ಯು ಕುಲಸಚಿವ ಡಾ ಟಿ.ಎನ್.ಶ್ರೀನಿವಾಸ್ ಮುಖ್ಯ ಅತಿಥಿಯಾಗಿರಲಿದ್ದಾರೆ. ವಿ.ಟಿ.ಯು ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ ಗೌರವ ಅತಿಥಿಯಾಗಿರಲಿದ್ದಾರೆ. ಎನ್.ಇ.ಎಸ್ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ್, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ಚೇತನ್, ಎನ್.ಇ.ಎಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಂ.ನೃಪತುಂಗ ಉಪಸ್ಥಿತರಿದ್ದರು.
ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಶುರುವಾಗಲಿಲ್ಲ ಸಿಟಿ ಬಸ್, ಪರಿಶೀಲಿಸಿದ ಡ್ರೈವರ್‌ಗೆ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200