ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಚಾಲನೆ, ಸಾವಿರ ಸಾವಿರ ಸರ್ಕಾರಿ ನೌಕರರು ಭಾಗಿ, ಹೇಗಿತ್ತು ಕಾರ್ಯಕ್ರಮ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ (Sports) ನೆಹರು ಕ್ರೀಡಾಂಗಣದಲ್ಲಿ ಚಾಲನೆ ದೊರೆತಿದೆ. ಇನ್ನೆರಡು ದಿನ ಶಿವಮೊಗ್ಗ ನಗರದ ವಿವಿಧೆಡೆ ನಾನಾ ಸ್ಪರ್ಧೆಗಳು ನಡೆಯಲಿವೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನೆಹರು ಕ್ರೀಡಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಜ್ಯೋತಿ ಸ್ವೀಕರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

SLV-BOOK-SHOP-SHIMOGA

ಯಾರೆಲ್ಲ ಏನೆಲ್ಲ ಹೇಳಿದರು?

ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ (ಒ.ಪಿ.ಎಸ್) ಜಾರಿಗೊಳಿಸುವ ನಿರ್ಧಾರವನ್ನು ಆದಷ್ಟು ಬೇಗ ಪ್ರಕಟಿಸಲು ಸರ್ಕಾರ ಬದ್ಧವಾಗಿದೆ. ಸರ್ಕಾರದ ಕಾನೂನು, ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸರ್ಕಾರಿ ನೌಕರರು ಆರೋಗ್ಯದಿಂದ, ಚೈತನ್ಯದಿಂದ ಇರಬೇಕು. ಇದಕ್ಕೆ ಇಂತಹ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ.ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಇ–ಆಡಳಿತದಲ್ಲಿ ರಾಜ್ಯವು ಇಡೀ ದೇಶಕ್ಕೆ ಮೊದಲ ಸ್ಥಾನ ಪಡೆದಿದೆ. ಅದರ ಶ್ರೇಯ ರಾಜ್ಯದ ಸರ್ಕಾರಿ ನೌಕರರಿಗೆ ಸಲ್ಲಬೇಕು. ನೌಕರರು ಒತ್ತಡ ರಹಿತರಾಗಿ, ಉತ್ತಮ ಸೇವೆ ನೀಡಬೇಕು. ನಿಮ್ಮಲ್ಲೂ ಅನೇಕ ಪ್ರತಿಭೆ ಇದ್ದು ಅದು ಹೊರಹೊಮ್ಮಲು ಇದೊಂದು ಉತ್ತಮ ವೇದಿಕೆ. ಬಿ.ವೈ.ರಾಘವೇಂದ್ರ, ಸಂಸದ

State-Level-Sports-Meet-at-Shimoga-Nehru-Stadium

ಜೂನ್ ತಿಂಗಳಿಂದ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆ ಜಾರಿಗೆ ಬರಲಿದೆ. ಕರ್ತವ್ಯನಿರತ ನೌಕರರ ಸಾವು ಸಂಭವಿಸಿದರೆ ಆ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವ ಯೋಜನೆಯನ್ನು ಸರ್ಕಾರದಿಂದ ಜಾರಿಗೊಳಿಸಲು ಸಂಘ ಪ್ರಯತ್ನಿಸುತ್ತಿದೆ.ಸಿ.ಎಸ್.ಷಡಾಕ್ಷರಿ, ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ

JNNCE-ADMISSION-2025-26

ಕಾರ್ಯಕ್ರಮದ ಹೈಲೈಟ್ಸ್‌

  • ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಬೇಕಿತ್ತು. ಹವಾಮಾನ ವೈಪರಿತ್ಯದಿಂದಾಗಿ ಅವರು ವಿಮಾನದಲ್ಲಿ ಬರಲು ಸಾಧ್ಯವಾಗದೆ ಕಾರ್ಯಕ್ರಮಕ್ಕೆ ಗೈರಾದರು.
  • ರಾಜ್ಯದ ವಿವಿಧೆಡೆಯ ಸಾವಿರಾರು ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನೌಕರರಿಗೆ ವಸತಿ, ಊಟದ ವ್ಯವಸ್ಥೆ ಮಾಡಲಾಗಿದೆ.
  • ಉದ್ಘಾಟನೆ ಕಾರ್ಯಕ್ರಮದ ಬಳಿಕ ಗಾಯಕ ರಾಜೇಶ್‌ ಕೃಷ್ಣನ್‌ ನೇತೃತ್ವದಲ್ಲಿ ಸರಿಗಮಪ ತಂಡದ ಗಾಯಕರು ಮ್ಯೂಸಿಕಲ್‌ ನೈಟ್ಸ್‌ ನಡೆಸಿದರು. ನೌಕರರು ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
  • ಇನ್ನೆರಡ ದಿನ ಶಿವಮೊಗ್ಗದ ವಿವಿಧೆಡೆ ಸಾಂಸ್ಕೃತಿಕ ಸ್ಪರ್ಧೆಗಳು, ಕ್ರೀಡಾಕೂಟ ನಡೆಯಲಿದೆ. 11 ಸಾವಿರಕ್ಕೂ ಹೆಚ್ಚು ನೌಕರರು ರಿಜಿಸ್ಟರ್‌ ಮಾಡಿಕೊಂಡಿದ್ದಾರೆ.
  • ವಿವಿಧ ಸ್ಪರ್ಧೆಗಳಲ್ಲಿ ಇಲ್ಲಿ ಗೆಲುವು ಸಾಧಿಸಿದವರು ರಾಷ್ಟ್ರಮಟ್ಟ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

Government Employees Sports meet in Shimoga

ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಬಲ್ಕಿಸ್‌ ಬಾನು, ರಾಜ್ಯ ಭೋವಿ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಸೂಡಾ ಅಧ್ಯಕ್ಷ ಸುಂದರೇಶ್, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ. ಸಿಇಒ ಎನ್. ಹೇಮಂತ್, ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಹಾಜರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment