ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ (Sports) ನೆಹರು ಕ್ರೀಡಾಂಗಣದಲ್ಲಿ ಚಾಲನೆ ದೊರೆತಿದೆ. ಇನ್ನೆರಡು ದಿನ ಶಿವಮೊಗ್ಗ ನಗರದ ವಿವಿಧೆಡೆ ನಾನಾ ಸ್ಪರ್ಧೆಗಳು ನಡೆಯಲಿವೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ನೆಹರು ಕ್ರೀಡಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಜ್ಯೋತಿ ಸ್ವೀಕರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಕಾರ್ಯಕ್ರಮದ ಹೈಲೈಟ್ಸ್
- ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಬೇಕಿತ್ತು. ಹವಾಮಾನ ವೈಪರಿತ್ಯದಿಂದಾಗಿ ಅವರು ವಿಮಾನದಲ್ಲಿ ಬರಲು ಸಾಧ್ಯವಾಗದೆ ಕಾರ್ಯಕ್ರಮಕ್ಕೆ ಗೈರಾದರು.
- ರಾಜ್ಯದ ವಿವಿಧೆಡೆಯ ಸಾವಿರಾರು ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನೌಕರರಿಗೆ ವಸತಿ, ಊಟದ ವ್ಯವಸ್ಥೆ ಮಾಡಲಾಗಿದೆ.
- ಉದ್ಘಾಟನೆ ಕಾರ್ಯಕ್ರಮದ ಬಳಿಕ ಗಾಯಕ ರಾಜೇಶ್ ಕೃಷ್ಣನ್ ನೇತೃತ್ವದಲ್ಲಿ ಸರಿಗಮಪ ತಂಡದ ಗಾಯಕರು ಮ್ಯೂಸಿಕಲ್ ನೈಟ್ಸ್ ನಡೆಸಿದರು. ನೌಕರರು ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
- ಇನ್ನೆರಡ ದಿನ ಶಿವಮೊಗ್ಗದ ವಿವಿಧೆಡೆ ಸಾಂಸ್ಕೃತಿಕ ಸ್ಪರ್ಧೆಗಳು, ಕ್ರೀಡಾಕೂಟ ನಡೆಯಲಿದೆ. 11 ಸಾವಿರಕ್ಕೂ ಹೆಚ್ಚು ನೌಕರರು ರಿಜಿಸ್ಟರ್ ಮಾಡಿಕೊಂಡಿದ್ದಾರೆ.
- ವಿವಿಧ ಸ್ಪರ್ಧೆಗಳಲ್ಲಿ ಇಲ್ಲಿ ಗೆಲುವು ಸಾಧಿಸಿದವರು ರಾಷ್ಟ್ರಮಟ್ಟ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.
ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಬಲ್ಕಿಸ್ ಬಾನು, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಸೂಡಾ ಅಧ್ಯಕ್ಷ ಸುಂದರೇಶ್, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ. ಸಿಇಒ ಎನ್. ಹೇಮಂತ್, ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಹಾಜರಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200