ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟ (Sports) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ ಮೂರು ದಿನ ಶಿವಮೊಗ್ಗದಲ್ಲಿ ನಡೆಯಲಿದೆ. ವಿವಿಧ ಜಿಲ್ಲೆಗಳ 15 ಸಾವಿರಕ್ಕಿಂತಲು ಹೆಚ್ಚಿನ ನೌಕರರು ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, ಮೇ 18ರಂದು ಸಂಜೆ 5 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

c s shadakshari press meet in shimoga

2017ರಲ್ಲಿ ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಶಿವಮೊಗ್ಗದಲ್ಲಿ ನಡೆಸಿದ್ದವು. ಈ ಬಾರಿ ಪುನಃ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಕಳೆದ ಬಾರಿಗಿಂತಲು ವಿಭಿನ್ನವಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.ಸಿ.ಎಸ್.ಷಡಾಕ್ಷರಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ

SLV-BOOK-SHOP-SHIMOGA

ಷಡಾಕ್ಷರಿ ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖಾಂಶ

  • ರಾಷ್ಟ್ರಮಟ್ಟಕ್ಕೆ ಕ್ರೀಡಾಕೂಟಕ್ಕೆ ಆಯ್ಕೆಯಾದವರಿಗೆ ಮೇ 18ರಂದು ಸಂಸದ ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಬೇಳೂರು ಗೋಪಾಲಕೃಷ್ಣ ಸನ್ಮಾನಿಸಲಿದ್ದಾರೆ. ಶಾಸಕ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
  • ಪ್ರತಿ ಜಿಲ್ಲೆಯಲ್ಲಿ ಸುಮಾರು 400 ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು 15 ಸಾವಿರಕ್ಕು ಹೆಚ್ಚು ನೌಕರರು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
  • ಒಟ್ಟು 144 ವಿವಿಧ ಸ್ಪರ್ಧೆಗಳು ನಡೆಯಲಿವೆ. ಈ ಪೈಕಿ ಕ್ರೀಡೆಯಲ್ಲಿ ವೈಯಕ್ತಿಕ 97, ಗುಂಪು ಕ್ರೀಡೆಗಳು 16 ಇರಲಿವೆ. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ 15 ವೈಯಕ್ತಿಕ, 16 ಗುಂಪು ಸ್ಪರ್ಧೆಗಳು ಇರಲಿವೆ.
  • ಮೇ 18ರಂದು ಸಂಜೆ 7 ಗಂಟೆಗೆ ಗಾಯಕ ರಾಜೇಶ್‌ ಕೃಷ್ಣನ್‌ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ಇರಲಿದೆ. ಮೇ 19ರಂದು ಸಂಜೆ 7 ಗಂಟಗೆ ಗಾಯಕರಿಂದ ಜನಪದ ದಿಬ್ಬಣ ಕಾರ್ಯಕ್ರಮ ಇರಲಿದೆ.

s1

  • ಮೇ 20ರಂದು ಮಧ್ಯಾಹ್ನ 3 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಟ್ರೋಫಿ ಮತ್ತು ನೆನಪಿನ ಕಾಣಿಕೆ ನೀಡಲಾಗುತ್ತದೆ.

DAILY-ONE-LAKH-VIEWS

ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಟಿ ಶರ್ಟ್‌, ಟ್ರ್ಯಾಕ್‌ ಸೂಟ್‌, ಕ್ಯಾಪ್‌ ನೀಡಲಾಗುತ್ತದೆ. ಇನ್ನು, ಮೂರು ದಿನವು ನಗರದ ಎನ್‌.ಇ.ಎಸ್‌ ಮೈದಾನದಲ್ಲಿ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ. ವಿಜೇತರಾದವರಿಗೆ ಈ ಬಾರಿ ಅತ್ಯಂತ ಆಕರ್ಷಕ ಟ್ರೋಫಿ ನೀಡಲಾಗುತ್ತಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವವರಿಗೆ ಸರ್ಕಾರ ಸಾಂದರ್ಭಿಕ ರಜೆ ಮಂಜೂರು ಮಾಡಿದೆ.ಸಿ.ಎಸ್.ಷಡಾಕ್ಷರಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ

JNNCE-ADMISSION-2025-26

ಸುದ್ದಿಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್‌.ಮೋಹನ್‌ ಕುಮಾರ್‌ ಸೇರಿದಂತೆ ಪದಾಧಿಕಾರಿಗಳು ಇದ್ದರು.

ಇದನ್ನೂ ಓದಿ » ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment