ಶಿವಮೊಗ್ಗ ಜಿಲ್ಲೆಯಾದ್ಯಂತ ಅ.31ರವರೆಗೆ ಜಾನುವಾರು ಜಾತ್ರೆ, ಜಾನುವಾರು ಸಾಗಾಣೆ ನಿಷೇಧ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಚರ್ಮಗಂಟು ರೋಗ (LUMPY SKIN DISEASE) ಹರಡದಂತೆ ತಡೆಗಟ್ಟಲು ಶಿವಮೊಗ್ಗ ಜಿಲ್ಲೆಯಾದ್ಯಂತ ಅ.31ರವರೆಗೆ ಜಾನುವಾರು ಜಾತ್ರೆ, ಜಾನುವಾರು ಸಂತೆ ಮತ್ತು ಜಾನುವಾರು ಸಾಗಣಿಕೆಯನ್ನು ಜಿಲ್ಲಾಧಿಕಾರಿ ಅವರು ನಿಷೇಧಿಸಿದ್ದಾರೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ.ಯಲಿ ಅವರು ತಿಳಿಸಿದ್ದಾರೆ.

Shimoga Nanjappa Hospital

ಚರ್ಮಗಂಟು ರೋಗಕ್ಕೆ (LUMPY SKIN DISEASE) ತುತ್ತಾಗಿ ಜಿಲ್ಲೆಯಲ್ಲಿ ಈಗಾಗಲೆ 6 ಜಾನುವಾರುಗಳು ಸಾವನ್ನಪ್ಪಿವೆ. 58 ಗ್ರಾಮಗಳ 626 ಜಾನುವಾರುಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಜಾನುವಾರು ಜಾತ್ರೆ, ಜಾನುವಾರು ಸಂತೆ ಮತ್ತು ಜಾನುವಾರುಗಳ ಸಾಗಣೆಯನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ ಲಸಿಕೆಗೆ ಬೇಡಿಕೆ (LUMPY SKIN DISEASE)

ರೋಗ ನಿಯಂತ್ರಣಕ್ಕೆ ಜಿಲ್ಲೆಯ ಪಶುಪಾಲನಾ ಇಲಾಖೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಶಿವಮೊಗ್ಗದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಇದೆ. ಇನ್ನು, ರೋಗ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಲು ಒಂದು ಲಕ್ಷ ಲಸಿಕೆಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಶಿವಯೋಗಿ ಯಲಿ ಅವರು ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಹೊಸ ಹೆಸರು ನಾಮಕರಣ

ಚರ್ಮಗಂಟು ರೋಗವು (LUMPY SKIN DISEASE) ಕ್ಯಾಪ್ರಿಪಾಕ್ಸ್ ವೈರಸ್ ನಿಂದ ಬರುತ್ತಿದೆ. ಸೊಳ್ಳೆ, ನೊಣ ಮತ್ತು ಉಣ್ಣೆ ಸೇರಿ ಪರೋಪಜೀವಿಗಳು ಕಚ್ಚುವುದರಿಂದ ರೋಗ ಹರಡುತ್ತಿದೆ. ಆದ್ದರಿಂದ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಜಾನುವಾರು ಸಾಗಣೆಯನ್ನು ನಿಷೇಧಿಸಾಗಿದೆ ಎಂದು ತಿಳಿಸಿದ್ದಾರೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಪಾಕಿಸ್ತಾನದ ಧ್ವಜ ಹಾರಾಟ ಅಂತಾ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ವಾರ್ನಿಂಗ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment