ಭದ್ರಾ ಡ್ಯಾಂನಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಭದ್ರಾ ಜಲಾಶಯ ಅಚ್ಚುಕಟ್ಟು ಪ್ರದೇಶದ ನೀರು ಬಳಕೆದಾರರ ಒಕ್ಕೂಟ ಮುಖ್ಯಮಂತ್ರಿಗಳನ್ನು ಆಗ್ರಹಿಸಿದೆ.

ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಜುಲೈ 9 ರಂದು ಕೇವಲ 155.9 ಅಡಿ ಮಾತ್ರ ನೀರಿದೆ. ಡೆಡ್ ಸ್ಟೋರೇಜ್, ಬೇಸಿಗೆಗೆ ಕುಡಿಯುವ ನೀರು ಇವೆಲ್ಲವೂ ಸೇರಿದರೆ ಕೇವಲ 28 ದಿನಗಳಿಗಾಗುವಷ್ಟು ಮಾತ್ರ ನೀರಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸುವುದು ಸೂಕ್ತವಲ್ಲ ಎಂದರು.

Nanjappa Hospital Advertisement

ತುಂಗಾ ನದಿಯಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ಅಲ್ಲದೇ ಯಥೇಚ್ಛವಾಗಿ ಹರಿದು ಹೋಗುತ್ತಿದೆ. ಇಲ್ಲಿಂದ 18.4 ಟಿಎಂಸಿ ನೀರೆತ್ತುವ ಯೋಜನೆ ವಿಳಂಬವಾಗುತ್ತಿದ್ದು, ಅದನ್ನು ಪೂರ್ಣಗೊಳಿಸಬೇಕು. ಆಗ ಭದ್ರಾ ಜಲಾಶಯದಿಂದ ನೀರು ಹರಿಸುವ ಬಗ್ಗೆ ಯೋಚಿಸಬಹುದಾಗಿದೆ. ಭದ್ರಾ ತುಂಬದ ಹೊರತು ವಾಣಿಗೆ ವಿಲಾಸ ಸಾಗರಕ್ಕೆ ನೀರು ನೀಡಬಾರದು. ಇಷ್ಟಾಗಿಯೂ ನೀರಾವರಿ ಸಲಹಾ ಸಮಿತಿ ಸಭೆ ಸೇರದೇ ನೀರು ಹರಿಸಲು ಮುಂದಾದರೆ ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ನೀರು ಬಳಕೆದಾರರ ಒಕ್ಕೂಟ ಮತ್ತು ರೈತ ಸಂಘದ ಮುಖಂಡರಾದ ಅತ್ತಿಗುಂದ ಆರ್. ಶ್ರೀನಿವಾಸ್, ಕೆ. ದೇವೇಂದ್ರಪ್ಪ, ಜಿ.ಎಂ. ಚನ್ನಬಸಪ್ಪ, ಎಸ್. ಶಿವಮೂರ್ತಿ, ಕೆ. ರಾಘವೇಂದ್ರ, ಹೆಚ್.ಎಂ. ಚಂದ್ರಪ್ಪ, ಮಲ್ಲಿಕಾರ್ಜುನ, ದೇವೇಂದ್ರಪ್ಪ ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment