ಗಾಂಧಿ ಬಜಾರ್‌ನಲ್ಲಿ ತಳ್ಳುಗಾಡಿ ವ್ಯಾಪಾರಿ ಮೇಲೆ ಪೊಲೀಸ್‌ ಹಲ್ಲೆ ಆರೋಪ, ಕೆಲ ಹೊತ್ತು ವಾಕ್ಸಮರ

SHIVAMOGGA LIVE NEWS | 8 JULY 2024

SHIMOGA : ತಳ್ಳುವ ಗಾಡಿ (Street Vendor) ವ್ಯಾಪಾರಿಯೊಬ್ಬರ ಮೇಲೆ, ಸಂಚಾರ ಠಾಣೆ ಪೊಲೀಸ್‌ ಸಿಬ್ಬಂದಿ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆ, ಗಾಂಧಿ ಬಜಾರ್‌ನಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ತಿಳಿಗೊಳಿಸಿದರು.

ಏನಿದು ಪ್ರಕರಣ?

ಗಾಂಧಿ ಬಜಾರ್‌ನಲ್ಲಿ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನ ಮೇಲೆ ಟ್ರಾಫಿಕ್‌ ಪೊಲೀಸ್‌ ಒಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದರಿಂದ ವ್ಯಾಪಾರಿಯನ್ನು ತೆರವುಗೊಳಿಸಲು ಮುಂದಾದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ವ್ಯಾಪಾರಿಯ ತಲೆಯಿಂದ ರಕ್ತ ಸುರಿಯುತ್ತಿದ್ದರಿಂದ ಪೊಲೀಸ್‌ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆ ನಡೆಸಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ಪಟ್ಟು ಹಿಡಿದರು. ಇದರಿಂದ ಗಾಂಧಿ ಬಜಾರ್‌ನಲ್ಲಿ ಕೆಲವು ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

SP-mithun-kumar-visit-gandhi-bazaar.

ಪೊಲೀಸ್‌ ಅಧಿಕಾರಿಗಳು ದೌಡು

ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಘಟನೆ ಸಂಬಂಧ ಪರಿಶೀಲನೆ ನಡೆಸಲಾಗುತ್ತದೆ. ಪೊಲೀಸ್‌ ಸಿಬ್ಬಂದಿ ತಪ್ಪೆಸಗಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಇದರಿಂದ ಪರಿಸ್ಥಿತಿ ತಿಳಿಗೊಂಡಿತು. ಮುನ್ನೆಚರಿಕೆ ಕ್ರಮವಾಗಿ ಗಾಂಧಿ ಬಜಾರ್‌ನಲ್ಲಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಇದನ್ನೂ ಓದಿ – ಅಳಿಯನ ಆತ್ಮಹತ್ಯೆಗೆ ಶಿವಮೊಗ್ಗದಲ್ಲಿ ಕಾರಣ ತಿಳಿಸಿದ ಮಾಜಿ ಸಚಿವ ಬಿ.ಸಿ.ಪಾಟೀಲ್‌, ಏನಂದ್ರು?

SP-mithun-kumar-visit-gandhi-bazaar.

Leave a Comment