
ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ನಗರದ ಬೀದಿ ಬದಿ ವ್ಯಾಪಾರ ಮಾಡುವವರಿಗೆ ವ್ಯಾಪಾರ ಮಾಡಲು ಅನುಮತಿ ನೀಡುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋ ಪಾಯ ಸಂರಕ್ಷಣೆ ಬೀದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019 ರ ಅಡಿಯಲ್ಲಿ ಗುರುತಿನ ಚೀಟಿ ಪಡೆದು, ಶಿವಮೊಗ್ಗ ನಗರದ ಬೀದಿ ಬದಿಯಲ್ಲಿ ಹಲವಾರು ಜನ ಹಣ್ಣು, ತರಕಾರಿ, ಗೋಬಿ ಮಂಚೂರಿ, ಕಾಫಿ, ಟೀ, ತಿಂಡಿಗಾಡಿ ಮುಂತಾದ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿರುವುದಾಗಿ ತಿಳಿಸಿದರು.
ಇದರಲ್ಲಿ ಹಲವರು ಕಡು ಬಡವರಾಗಿದ್ದು, ತಮ್ಮ ಜೀವನೋಪಾಯಕ್ಕೆ ಬೀದಿ ಬದಿ ವ್ಯಾಪಾರ ವನ್ನೇ ಅವಲಂಬಿಸಿರುತ್ತಾರೆ. ಬೀದಿ ಬದಿ ವ್ಯಾಪಾರ ಬಿಟ್ಟು ಅವರಿಗೆ ಬೇರೆ ಯಾವುದೇ ಆದಾಯ ಮೂಲಗಳಿರುವುದಿಲ್ಲ. ಈಗ ಸರ್ಕಾರದ ಲಾಕ್ ಡೌನ್ ಆದೇಶದಿಂದಾಗಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಬಿಡುತ್ತಿಲ್ಲ ಅಳಲು ತೋಡಿಕೊಂಡರು.
ಆದ್ದರಿಂದ ಜೀವನ ನಡೆಸಲು ಬಹಳ ಕಷ್ಟವಾಗಿರುತ್ತದೆ. ತಮ್ಮನ್ನೆ ನಂಬಿಕೊಂಡ ಕುಟುಂಬ ಬೀದಿಗೆ ಬೀಳುವಂತಾಗಿದೆ ಎಂದು ಹೇಳಿದರು. ಆದರೆ ಕೆಲವು ವ್ಯಾಪಾರಸ್ಥರಿಗೆ ವ್ಯಾಪಾರ ಮುಂದುವರಿಸಲು ಅನುಮತಿ ದೊರೆತಿದ್ದು, ಅವರು ತಮ್ಮ ದಿನನಿತ್ಯದ ವ್ಯಾಪಾರವನ್ನು ಮಾಡುತ್ತಿದ್ದಾರೆ. ಆದರೆ ನಮಗೆ ಅವಕಾಶ ನೀಡಿಲ್ಲ. ಇದರಿಂದಾಗಿ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾರಾಯಣ, ಶೇಷಯ್ಯ. ವಿನಯ, ಇಮ್ರಾನ್, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]