ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಕರ್ಫ್ಯೂ ಹಿನ್ನೆಲೆ ಇವತ್ತು ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ. ವ್ಯಾಪಾರ, ವಹಿವಾಟು ಇಲ್ಲದೆ ನಗರ ಬಣಗುಡುತ್ತಿದೆ. ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ವ್ಯಾಪಾರ, ವಹಿವಾಟು ಬಂದ್
ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ದುರ್ಗಿಗುಡಿ ಸೇರಿದಂತೆ ಬಹುಭಾಗದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ.
ಜನ ಸಂಚಾರ ವಿರಳ
ಕರ್ಫ್ಯೂ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವ್ಯಾಪಾರ ವಹಿವಾಟು ಕೂಡ ಸ್ಥಬ್ಧಗೊಂಡಿದ್ದರಿಂದ ಜನ ಸಂಚಾರ ಕೂಡ ವಿರಳವಾಗಿತ್ತು. ಕೆಲವು ಕಡೆ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಅನಗತ್ಯ ಜನ ಸಂಚಾರಕ್ಕೆ ತಡೆಯೊಡ್ಡಲಾಗಿತ್ತು.
ಪ್ರಮುಖ ರಸ್ತೆಗಳೆಲ್ಲ ಬಂದ್
ಕರ್ಫ್ಯೂ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದರು. ಬ್ಯಾರಿಕೇಡ್ ಹಾಕಿ ಮುಖ್ಯ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಜನ ಮತ್ತು ವಾಹನ ಸಂಚಾರ ತಡೆಗೆ ಈ ಕ್ರಮ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಯಾದರೂ ಆಟೋ, ಬೈಕುಗಳಿಗೆ ಬೆಂಕಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






