ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 DECEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ವಿಚಾರ ತಿಳಿದು ಆಕೆಯ ಪೋಷಕರು, ಸಂಬಂಧಿಕರು ಮತ್ತು ವಿವಿಧ ಸಂಘಟನೆಗಳ ಮುಖಂಡು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಮಹಡಿಯಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ
ನಗರದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಮೇಘಶ್ರೀ (17) ಮೃತಳು. ಇವತ್ತು ಬೆಳಗ್ಗೆ ಪರೀಕ್ಷೆ ಬರೆಯಲು ಮೇಘಶ್ರೀ ಕಾಲೇಜಿಗೆ ಆಗಮಿಸಿದ್ದಳು. ಈ ಸಂದರ್ಭ ಘಟನೆ ಸಂಭವಿಸಿದೆ. ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ಕೂಡಲೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ ಹೊತ್ತಿಗಾಗಲೆ ಮೇಘಶ್ರೀ ಕೊನೆಯುಸಿರೆಳೆದಿದ್ದಳು. ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೇಘಶ್ರೀ ಮೃತದೇಹ ಇರಿಸಲಾಗಿದೆ.
ಪೋಷಕರ ಆಕ್ರಂದನ, ಆಕ್ರೋಶ, ಅನುಮಾನ
ಇನ್ನು ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿ ಮೇಘಶ್ರೀ ಪೋಷಕರು, ಸಂಬಂಧಿಗಳು, ವಿವಿಧ ಸಂಘಟನೆಗಳ ಪ್ರಮುಖರು ಕಾಲೇಜಿಗೆ ಆಗಮಿಸಿದರು. ಆದರೆ ಕಾಲೇಜ ಆವರಣದೊಳಗೆ ಯಾರೂ ಪ್ರವೇಶಿಸದಂತೆ ನಿರ್ಬಂಧಿಸಲಾಗಿತ್ತು. ಹಾಗಾಗಿ ವಿದ್ಯಾರ್ಥಿನಿ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಬಳಿಕ ಕಾಲೇಜು ಆವರಣ ಪ್ರವೇಶಿಸಿದ ಕುಟುಂಬದವರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಆಡಳಿತ ಮಂಡಳಿ ಕಚೇರಿಗೆ ತೆರಳಿ ವಿದ್ಯಾರ್ಥಿನಿ ಸಾವಿನ ಕುರಿತು ಸ್ಪಷ್ಟನೆ ಬಯಸಿ ಪ್ರತಿಭಟನೆ ನಡೆಸಿದರು.
ಸಿಸಿಟಿವಿ ವಿಡಿಯೋಗೆ ಪಟ್ಟು
ವತ್ತೊಂದೆಡೆ ವಿದ್ಯಾರ್ಥಿನಿ ಮೇಘಶ್ರೀ ಸಾವಿನ ಕುರಿತು ಪೋಷಕರು ಅನುಮಾನ ವ್ಯಕ್ತಡಿಸಿದ್ದಾರೆ. ಆಕೆ ಕೆಳಗೆ ಬಿದ್ದ ಸಿಸಿಟಿವಿ ದೃಶ್ಯಾವಳಿ ಒದಗಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭ ಕೆಲವರು ಕಾಲೇಜಿನಲ್ಲಿದ್ದ ಬ್ಯಾನರ್ ಹರಿದು ಹಾಕಿದರು. ಕೊನೆಗೆ ಪೊಲೀಸರು ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಿದರು. ಆದರೆ ಆಡಳಿತ ಮಂಡಳಿಯವರು ಸ್ಪಷ್ಟನೆ ನೀಡುವವರೆಗೆ ಕಾಲೇಜು ಆವರಣದಲ್ಲಿ ಧರಣಿ ಮುಂದುವರೆಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಘಟನೆ ಹಿನ್ನೆಲೆ ಕಾಲೇಜು ಆವರಣದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿದ್ಯಾನಗರದಲ್ಲಿ ATMಗೆ ವಂಚಿಸಿದ ದುಷ್ಕರ್ಮಿಗಳು, SBI ಬ್ಯಾಂಕ್‌ಗೆ ಲಕ್ಷ ಲಕ್ಷ ನಷ್ಟ, ಏನಿದು ಕೇಸ್?