ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 18 DECEMBER 2024
ಶಿವಮೊಗ್ಗ : ನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು (Student) ದಿಢೀರ್ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ಬಂದು ಬಾಗಿಲು ತೆಗೆಯುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ಉಪನ್ಯಾಸಕರು, ಸಹಪಾಠಿಗಳು ಆಕೆಯ ನೆರವಿಗೆ ಧಾವಿಸಿದ್ದಾರೆ. ಕೂಡಲೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾಳೆ. (ಮನವಿ ಹಿನ್ನಲೆ ಕಾಲೇಜು ಮತ್ತು ವಿದ್ಯಾರ್ಥಿನಿ ಹೆಸರು ಗೌಪ್ಯ)

ಇದನ್ನೂ ಓದಿ » ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸ್ ರೇಡ್, 11 ಮಂದಿ ವಿರುದ್ಧ ಕೇಸ್
ವಿದ್ಯಾರ್ಥಿನಿ ಓದಿದ್ದ ಪ್ರೌಢಶಾಲೆಯ ಶಿಕ್ಷಕರು ಪಿಯು ಕಾಲೇಜಿಗೆ ಆಗಮಿಸಿದ್ದರು. ವಿಷಯ ತಿಳಿದು ಅವರನ್ನು ಮಾತನಾಡಿಸಲು ವಿದ್ಯಾರ್ಥಿನಿ (Student) ತನ್ನ ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ತೆರಳಿದ್ದಾಗ ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
LATEST NEWS
- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು















