ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 ಮಾರ್ಚ್ 2022
ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ.
ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ.
ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಬಳ್ಳೆಕೆರೆ ಸಂತೋಷ್ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದರು. ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















