ರಸ್ತೆಯಲ್ಲಿ ಕೈ ಕೈ ಮಿಲಾಯಿಸಿದ ಕಾಲೇಜು ವಿದ್ಯಾರ್ಥಿಗಳು | ಪುರಲೆಯಲ್ಲಿ ಯುವಕರ ಮೇಲೆ ರಾಡ್‌, ದೊಣ್ಣೆಯಿಂದ ದಾಳಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 24 DECEMBER 2023

FATAFAT-NEWS-1SHIMOGA : ರಸ್ತೆಯಲ್ಲಿ ಕೈ ಕೈ ಮಿಲಾಯಿಸಿ ಸಾರ್ವಜನಿಕ ನೆಮ್ಮದಿಗೆ ಭಂಗ ತಂದ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ನಗರದ ಸರ್ಜಿ ಕನ್ವೆಷನ್‌ ಹಾಲ್‌ ಸಮೀಪ ಘಟನೆ ಸಂಭವಿಸಿದೆ. ಓರ್ವ ಅಪ್ರಾಪ್ತ ಸೇರಿ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸುತ್ತಿದ್ದರು. ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದು ವಿನೋಬನಗರ ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿದ್ದಾರೆ.

ಬೀಗ ಹಾಕಿದ್ದ ಮನೆ ಮುಂದೆ ಅನುಮಾನಾಸ್ಪದ ವರ್ತನೆ

FATAFAT-NEWS-2SHIMOGA : ಬೀಗ ಹಾಕಿದ್ದ ಮನೆಯೊಂದರ ಮುಂದೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬೊಮ್ಮನಕಟ್ಟೆಯ ಬಿ ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ. ಗುರುವಾರ ಸಂಜೆ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಬೀಗ ಹಾಕಿದ್ದ ಮನೆ ಮುಂದೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಪೊಲೀಸರನ್ನು ಕಂಡು ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಹಿಡಿದು ವಿಚಾರಣೆ ಮಾಡಿದಾಗ ತನ್ನ ಹೆಸರು ಸಂತೋಷ್‌ ಎಂದು ಬಾಯಿಬಿಟ್ಟಿದ್ದಾನೆ. ಅಪರಾಧ ಕೃತ್ಯ ಎಸಗಬಹುದು ಎಂಬ ಅನುಮಾನದ ಮೇರೆಗೆ ಆತನ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಸುತ್ತಿದ್ದವರಿಗೆ ಮದುವೆ ಮಾಡಿಸಿದ್ದಕ್ಕೆ ಹಲ್ಲೆ

FATAFAT-NEWS-3SHIMOGA : ಪ್ರೀತಿಸುತ್ತಿದ್ದ ಜೋಡಿಗೆ ವಿವಾಹ ಮಾಡಿಸಿದ ಕಾರಣಕ್ಕೆ ಯುವತಿ ಸಂಬಂಧಿಕರು ಮೂವರು ಯುವಕರ ಮೇಲೆ ಕಬ್ಬಿಣ ರಾಡ್‌ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗದ ಪುರಲೆಯಲ್ಲಿ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ. ಶ್ರೀನಿವಾಸ್‌, ಲೋಕೇಶ್‌ ಮತ್ತು ಅಭಿಷೇಕ್‌ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಸಂತೋಷ್‌ ಸೇರಿದಂತೆ ಐವರು ಕಬ್ಬಿಣ ರಾಡ್‌ ಮತ್ತು ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಶ್ರೀನಿವಾಸ್‌ ತಲೆಗೆ ತೀವ್ರ ಪೆಟ್ಟಾಗಿದೆ. ಗಾಯಾಗೊಂಡಿದ್ದ ಮೂವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಲೋಕಾಯುಕ್ತ ದಾಳಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಮೆಸ್ಕಾಂ ಇಂಜಿನಿಯರ್‌ ಅರೆಸ್ಟ್‌

Leave a Comment