ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 21 SEPTEMBER 2024 : ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ ಉಪನ್ಯಾಸಕನನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಸಭ್ಯ ಮಾತುಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ, ಪ್ರಾಚಾರ್ಯರಿಗೆ ನೊಟೀಸ್ ನೀಡಿದ್ದಾರೆ ಎಂದು ಆರೋಪಿಸಿದರು. 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಇನ್ನು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಯಾವುದೇ ಅನುಮಾನ ಬೇಡ ಎಂದು ಭರವಸೆ ನೀಡಿದರು.
(ಅಪ್ರಾಪ್ತೆಯ ಪ್ರಕರಣ ಆಗಿರುವುದರಿಂದ ಶಿಕ್ಷಣ ಸಂಸ್ಥೆಯ ಹೆಸರು, ವಿವರಗಳನ್ನು ಪ್ರಕಟಿಸುವಂತಿಲ್ಲ. ಅದೇ ರೀತಿ ಪ್ರತಿಭಟನೆಯ ಫೋಟೊ ಕೂಡ ಬಳಕೆ ಮಾಡುತ್ತಿಲ್ಲ)
ಇದನ್ನೂ ಓದಿ » ಈದ್ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ