ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ, ಉಪನ್ಯಾಸಕನ ವಿರುದ್ಧ ಪ್ರತಿಭಟನೆ

SHIMOGA NEWS, 21 SEPTEMBER 2024 : ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ ಉಪನ್ಯಾಸಕನನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. (ಈ ಸುದ್ದಿಯನ್ನು ಇನ್ನು 45 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಸಭ್ಯ ಮಾತುಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ, ಪ್ರಾಚಾರ್ಯರಿಗೆ ನೊಟೀಸ್‌ ನೀಡಿದ್ದಾರೆ ಎಂದು ಆರೋಪಿಸಿದರು. 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದರು.

ಇನ್ನು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಯಾವುದೇ ಅನುಮಾನ ಬೇಡ ಎಂದು ಭರವಸೆ ನೀಡಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

(ಅಪ್ರಾಪ್ತೆಯ ಪ್ರಕರಣ ಆಗಿರುವುದರಿಂದ ಶಿಕ್ಷಣ ಸಂಸ್ಥೆಯ ಹೆಸರು, ವಿವರಗಳನ್ನು ಪ್ರಕಟಿಸುವಂತಿಲ್ಲ. ಅದೇ ರೀತಿ ಪ್ರತಿಭಟನೆಯ ಫೋಟೊ ಕೂಡ ಬಳಕೆ ಮಾಡುತ್ತಿಲ್ಲ)

ಇದನ್ನೂ ಓದಿ » ಈದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Police-Jeep-at-Shimoga-General-Image

Leave a Comment