ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿದ್ಯಾರ್ಥಿನಿಯರಿಗೆ ಅತಿಥಿ ಉಪನ್ಯಾಸಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ದಿಢೀರ್ ರಸ್ತೆ ತಡೆ ನಡೆಸಿ, ಧರಣಿ ಮಾಡಿದರು.
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಅತಿಥಿ ಉಪನ್ಯಾಸಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆಪಾದಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಸಂಘಟನೆ ಬೆಂಬಲ ನೀಡಿತ್ತು.
ವಿದ್ಯಾರ್ಥಿಗಳ ಆರೋಪ ಏನು?
ಈ ಅತಿಥಿ ಉಪನ್ಯಾಸಕ ತರಗತಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ, ವಿದ್ಯಾರ್ಥಿನಿಯರಿಗೆ ಮಾತ್ರ ಪಾಠ ಮಾಡುತ್ತಿದ್ದರು. ಕಳೆದ ವರ್ಷವು ಇದೆ ರೀತಿ ಮಾಡಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಈ ಸಂಬಂಧ ವಿಭಾಗ ಮುಖ್ಯಸ್ಥರಿಗೆ ದೂರು ನೀಡಲಾಗಿತ್ತು ಎಂದು ಆಪಾದಿಸಿದರು. ಈ ಸಂಬಂಧ ಎಬಿವಿಪಿ ಸಂಘಟನೆ ವತಿಯಿಂದ ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ – GOOD NEWS – ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಬಸ್, ಆಟೋ ಪ್ರೀ ಪೇಡ್ ಕೌಂಟರ್, ಗಡುವು ನೀಡಿದ ಡಿಸಿ
ಪ್ರತಿಭಟನೆ, ರಸ್ತೆ ತಡೆ
ಇನ್ನು, ಅತಿಥಿ ಉಪನ್ಯಾಸಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಅಲ್ಲದೆ, ಕಾಲೇಜು ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ದಿಢೀರ್ ರಸ್ತೆ ನಡೆಸಿದರು. ಇದರಿಂದ ಬಿ.ಹೆಚ್.ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.