KSRTC ಬಸ್ ಕಂಡಕ್ಟರ್’ಗಳ ವಿರುದ್ಧ ವಿದ್ಯಾರ್ಥಿಗಳಿಂದ ಶಿವಮೊಗ್ಗ ಡಿಸಿಗೆ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 26 ಜುಲೈ 2022

ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸುವುದಿಲ್ಲ. ಪಾಸ್ ಇರುವ ವಿದ್ಯಾರ್ಥಿಗಳನ್ನು (STUDENTS) ಹತ್ತಿಸಿಕೊಳ್ಳುವುದಿಲ್ಲ. ಕಂಡಕ್ಟರ್’ಗಳು ಕೆಟ್ಟದಾಗಿ ನಿಂದಿಸುತ್ತಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

Shimoga Nanjappa Hospital

ತಾಲೂಕಿನ ತುಪ್ಪೂರು (TUPPURU) ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆ ಮಾಡದೇ ಇರುವುದರಿಂದ ಪ್ರತಿದಿನ ಶಿವಮೊಗ್ಗ, ಆಯನೂರು ಮುಂತಾದ ಭಾಗಗಳಿಗೆ ಶಾಲೆ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಯುವ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ತುಪ್ಪೂರು, ಸನ್ನಿವಾಸ, ಜಟ್ಟಿಸರ, ಗದ್ದೆಮನೆ, ಹೊರಬೈಲು, ಚೋಡನಾಳ, ಬ್ಯಾಡನಾಳ, ಗೋಣಿ ಜಟ್ಟು ಮುಂತಾದ ಭಾಗಗಳಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿವಮೊಗ್ಗ, ಆಯನೂರು, ಸಾಗರಕ್ಕೆ ಪ್ರತಿ ದಿನ ಪ್ರಯಾಣಿಸುತ್ತಾರೆ. ಆದರೆ ಇಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆ ಇರುವುದಿಲ್ಲ. ಚೋರಡಿವರೆಗೆ ತೆರಳಿ ಅಲ್ಲಿಂದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಸ್‌ಆರ್‌ಟಿಸಿ (KSRTC) ಪಾಸ್‌ ಇದ್ದರೂ ಕಡೆಯ ಕ್ಷಣದವರೆಗೂ ನಿರ್ವಾಹಕರು ಬಸ್ (BUS) ಹತ್ತುವ ಅವಕಾಶ ನೀಡುವುದಿಲ್ಲ. ಬಸ್ ಹೊರಟ ಬಳಿಕ ವಿದ್ಯಾರ್ಥಿಗಳನ್ನು (STUDENTS) ನಿಂದಿಸುತ್ತಾರೆ. ವಿನಾಕಾರಣ ಮನ ನೋಯುವಂತೆ ಮಾತನಾಡುತ್ತಾರೆ. ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಗೃಹದಲ್ಲಿ ನಿಗದಿಪಡಿಸಿದ್ದಕ್ಕಿಂತಲೂ ಹೆಚ್ಚಿನ ಹಣ ಪಡೆಯುತ್ತಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆಗೆ ವ್ಯವಸ್ಥೆ ಮಾಡುವಂತೆ, ನಿರ್ವಾಹಕರ ಸನ್ನಡತೆಯಿಂದ ನಡೆದುಕೊಳ್ಳುವಂತೆ ಹಾಗೂ ಕೆಎಸ್‌ಆರ್‌ಟಿಸಿ ಸಾರ್ವಜನಿಕ ಶೌಚಗೃಹಗಳಲ್ಲಿ ನಿಗದಿಪಡಿಸಿದಷ್ಟೇ ಹಣ ಪಡೆಯುವಂತೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ಕೆಆರ್‌ಎಸ್‌ ಯುವ ಘಟಕದ ಜಿಲ್ಲಾಧ್ಯಕ್ಷ ಬಿ.ಆರ್.ಮಧು, ಯುವ ಸಂಚಾಲಕ ಮೊಹಮ್ಮದ್ ಅಯಾಜ್, ಪ್ರೀತಿ, ವಿದ್ಯಾ, ಗಣೇಶ್ ಇತರರು ಪ್ರತಿಭಟನೆಯಲ್ಲಿದ್ದರು.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment