ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JUNE 2024
SHIMOGA : ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಆದ್ದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್‌ಎಸ್‌ಯುಐ ಸಂಘಟನೆ (Students) ಆಗ್ರಹಿಸಿದೆ.
ಸುರಿವ ಮಳೆಯಲ್ಲೂ ಮಹಾವೀರ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರು, ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಅನುಮಾನವಿದೆ. 67 ವಿದ್ಯಾರ್ಥಿಗಳು ಪ್ರಥಮ ರಾಂಕ್ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣೆ ಫಲಿತಾಂಶದಂತೆ ನೀಟ್ ಫಲಿತಾಂಶ ಪ್ರಕಟಿಸಿರುವುದು ಸೇರಿದಂತೆ ಹಲವು ಅನುಮಾನಗಳಿವೆ ಎಂದು ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದರು.
ಇದನ್ನೂ ಓದಿ – ಸರ್ಕಾರಿ ಆಸ್ಪತ್ರೆಗೆ ಎಂಎಲ್‌ಎ ದಿಢೀರ್ ಭೇಟಿ, ಏನೇನೆಲ್ಲ ಚೆಕ್ ಮಾಡಿದರು?
ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಎನ್‌ಎಸ್‌ಯುಐ ಕಾರ್ಯಕರ್ತರು ಮನವಿ ಸಲ್ಲಿಸಿದರು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಚಂದ್ರು ಜಿ.ರಾವ್ ಮತ್ತಿತರರಿದ್ದರು.
[su_note note_color=”#ffd1fd” text_color=”#000000″ radius=”1″]
ಭದ್ರಾವತಿಯಲ್ಲಿಯು ವಿದ್ಯಾರ್ಥಿಗಳ ಆಕ್ರೋಶ

BHADRAVATHI : ನೀಟ್ ಪರೀಕ್ಷೆ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿದ್ದು, ಉನ್ನತ ಮಟ್ಟದ ತನಿಖೆಯಾಗಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿದೆ. ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ಎನ್‌ಎಸ್‌ಯುಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಎಂ. ಮುಸವಿರ್ ಬಾಷಾ, ಮುರುಗೇಶ್ ಸೇರಿದಂತೆ ಹಲವರು ಇದ್ದರು.[/su_note]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















