ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಆದ್ದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್ಎಸ್ಯುಐ ಸಂಘಟನೆ (Students) ಆಗ್ರಹಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುರಿವ ಮಳೆಯಲ್ಲೂ ಮಹಾವೀರ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಎನ್ಎಸ್ಯುಐ ಕಾರ್ಯಕರ್ತರು, ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಅನುಮಾನವಿದೆ. 67 ವಿದ್ಯಾರ್ಥಿಗಳು ಪ್ರಥಮ ರಾಂಕ್ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣೆ ಫಲಿತಾಂಶದಂತೆ ನೀಟ್ ಫಲಿತಾಂಶ ಪ್ರಕಟಿಸಿರುವುದು ಸೇರಿದಂತೆ ಹಲವು ಅನುಮಾನಗಳಿವೆ ಎಂದು ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದರು.
ಇದನ್ನೂ ಓದಿ – ಸರ್ಕಾರಿ ಆಸ್ಪತ್ರೆಗೆ ಎಂಎಲ್ಎ ದಿಢೀರ್ ಭೇಟಿ, ಏನೇನೆಲ್ಲ ಚೆಕ್ ಮಾಡಿದರು?
ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಎನ್ಎಸ್ಯುಐ ಕಾರ್ಯಕರ್ತರು ಮನವಿ ಸಲ್ಲಿಸಿದರು. ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಚಂದ್ರು ಜಿ.ರಾವ್ ಮತ್ತಿತರರಿದ್ದರು.
BHADRAVATHI : ನೀಟ್ ಪರೀಕ್ಷೆ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿದ್ದು, ಉನ್ನತ ಮಟ್ಟದ ತನಿಖೆಯಾಗಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸಬೇಕೆಂದು ಎನ್ಎಸ್ಯುಐ ಆಗ್ರಹಿಸಿದೆ. ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ಎನ್ಎಸ್ಯುಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಎಂ. ಮುಸವಿರ್ ಬಾಷಾ, ಮುರುಗೇಶ್ ಸೇರಿದಂತೆ ಹಲವರು ಇದ್ದರು.ಭದ್ರಾವತಿಯಲ್ಲಿಯು ವಿದ್ಯಾರ್ಥಿಗಳ ಆಕ್ರೋಶ