ಶಿವಮೊಗ್ಗ ಲೈವ್.ಕಾಂ | SHIMOGA | 1 ಅಕ್ಟೋಬರ್ 2019

ನವುಲೆಯಲ್ಲಿರುವ ಹಿಂದುಳಿದ ವರ್ಗಗಳ ವೃತ್ತಿಪರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್’ನಲ್ಲಿನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಇಂದು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಅವ್ಯವಸ್ಥೆ ಪ್ರಶ್ನಿಸುವ ವಿದ್ಯಾರ್ಥಿಗಳ ವಿರುದ್ಧ ದರ್ಪ ತೋರಿಸುತ್ತಿರುವ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
![]() |
NSUI ವಿದ್ಯಾರ್ಥಿಗ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಗುಣಮಟ್ಟದ ಆಹಾರ ನೀಡಬೇಕು ಎಂದು ಸರ್ಕಾರ ಹೆಚ್ಚು ಅನುದಾನ ಬಿಡುಗಡೆ ಮಾಡುತ್ತಿದೆ. ಆದರೂ ಕೊಳೆತ ತರಕಾರಿ, ಹುಳುಬಿದ್ದ ಅಕ್ಕಿ ಹಾಕಿ ಅಡುಗೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಓದಲು ಸೂಕ್ತ ವಾತಾವರಣವಿಲ್ಲ. ವಿದ್ಯಾರ್ಥಿಗಳ ಆರೋಗ್ಯದ ಕುರಿತು ಯಾವುದೆ ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಕೂಡಲೆ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.
NSUI ರಾಜ್ಯ ಉಪಾಧ್ಯಕ್ಷ ಶ್ರೀಜಿತ್, ನಗರ ಕಾರ್ಯಾಧ್ಯಕ್ಷ ರಘು, ನಗರಾಧ್ಯಕ್ಷ ವಿಜಯ್, ಹಾಸ್ಟೆಲ್ ಘಟಕದ ಅಧ್ಯಕ್ಷ ರವಿಕುಮಾರ್, ನಗರ ಕಾರ್ಯದರ್ಶಿ ಚಂದೋಜಿರಾವ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200