ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021
ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಶಾಲಾ ಕಾಲೇಜುಗಳು ಆರಂಭಗೊಂಡು ತಿಂಗಳು ಕಳೆದರೂ ಹಾಸ್ಟೆಲ್‌ಗಳು ತೆರೆದಿಲ್ಲ. ಕಳೆದೆರಡು ವರ್ಷಗಳಿಂದ ಕರೊನಾ ಭೀತಿಯಿಂದ ಶಾಲಾ ಕಾಲೇಜು ಸರಿಯಾಗಿ ನಡೆದಿಲ್ಲ. ಈ ಬಾರಿ ನವೆಂಬರ್‌ನಿಂದ ಪೂರ್ಣಾವಧಿ ತರಗತಿ ಆರಂಭ ವಾಗಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿದರೂ ಹಾಸ್ಟೆಲ್ ಪ್ರಾರಂಭಿಸಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದರು.
ಹಾಸ್ಟೆಲ್‌ಗಳಿಗೆ ಪ್ರವೇಶಕ್ಕಾಗಿ 2 ತಿಂಗಳ ಹಿಂದೆಯೇ ಅರ್ಜಿ ಸಲ್ಲಿಕೆ ಅವಧಿ ಮುಗಿದಿದ್ದರೂ ಇದುವರೆಗೂ ಯಾವುದೇ ಹಾಸ್ಟೆಲ್‌ಗಳಿಗೆ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ. ಇದರಿಂದ ಶಿಕ್ಷಣಕ್ಕಾಗಿ ಆಗಮಿಸುತ್ತಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅನಿವಾರ್ಯವಾಗಿ ದುಬಾರಿ ಹಣ ತೆತ್ತು ಪಿಜಿಗಳಲ್ಲಿ ಉಳಿಯಬೇಕಾಗಿದೆ. ಕೆಲವರು ಶಾಲಾ-ಕಾಲೇಜುಗಳಿಗೆ ಆಗಮಿಸದೇ ಶಿಕ್ಷಣದಿಂದ ವಂಚಿತರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಎನ್ಎಸ್‌ಯುಐ ರಾಜ್ಯ ಕಾರ್ಯದರ್ಶಿ ಹೆಚ್.ಎಸ್.ಬಾಲಾಜಿ, ಕಾರ್ಯಾಧ್ಯಕ್ಷ ಜಿ.ರವಿಕುಮಾರ್, ನಗರಾಧ್ಯಕ್ಷ ಎಸ್.ಎನ್.ವಿಜಯ್ ಕುಮಾರ್, ರವಿ, ಚಂದ್ರೋಜಿ ರಾವ್, ಕಿರಣ, ಸಂಜು, ಸುಮನ್, ವಿಜಯ್, ಮಂಜು ಮತ್ತಿತರರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422