ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 AUGUST 2023
SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್
ಅಧ್ಯಯನಕ್ಕೆ ಕಡಿಮೆ ಸಮಯ ಸಿಗುವುದರಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಸಿಲುಕಲಿದ್ದಾರೆ. ಆರೋಗ್ಯದ ಮೇಲೂ ಪರಿಣಾಮ ಉಂಟಾಗಲಿದೆ. ಆದ್ದರಿಂದ ವೇಳಾಪಟ್ಟಿಯನ್ನು ಸಡಿಲಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ವೇಳೆ ಸಿ.ಎಂ.ಚಿನ್ಮಯ್, ಅಜಿತ್, ದರ್ಶನ್ ಸೇರಿದಂತೆ ಹಲವರು ಇದ್ದರು.