SHIVAMOGGA LIVE NEWS | 11 JANUARY 2024
SHIMOGA : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಮತ್ತು ಹೊರ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ. ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
![]() |
ಸಾವಿರ ಸಾವಿರ ಸಂಖ್ಯೆಯ ವಿದ್ಯಾರ್ಥಿಗಳು
ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲಾಗುತ್ತಿದೆ. ಈಗಾಗಲೆ ವಿವಿಧ ಕಾಲೇಜುಗಳ ಆಡಳಿತ ಮಂಡಳಿ, ಪ್ರಾಂಶುಪಾಲರ ಜೊತೆಗೆ ಸಚಿವರು ಸಭೆ ನಡೆಸಿದ್ದಾರೆ. ಪ್ರತಿ ಕಾಲೇಜಿಗು ಬಸ್ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಿಜೆಪಿ ನಾಯಕರ ಆಕ್ಷೇಪ
ಕಾಲೇಜು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿರುವುದು ಬಿಜೆಪಿ ಮತ್ತು ಅದರ ಸಹ ಸಂಘಟನೆ ಎಬಿಪಿಪಿ ವಿರೋಧ ವ್ಯಕ್ತಪಡಿಸಿದೆ. ಈಗಾಗಲೆ ಎಬಿವಿಪಿ ಸಂಘಟನೆ ಸರ್ಕಾರದ ನಡೆ ವಿರೋಧಿಸಿ ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಇನ್ನೊಂದೆಡೆ ಬಿಜೆಪಿ ಕೂಡ ಆಕ್ಷೇಪ ವ್ಯಕ್ತಪಡಿಸಿದೆ.
ಯುವಕರ ರಕ್ಷಣೆಗಾಗಿ ಯುವನಿಧಿ
ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಮುಖಂಡರು ತಿರುಗೇಟು ನೀಡಲು ಆರಂಭಿಸಿದ್ದಾರೆ. ಯುವ ಸಮೂಹಕ್ಕೆ ತಲುಪಬೇಕಾದ ಕಾರ್ಯಕ್ರಮವಾದ್ದರಿಂದ ಕಾಲೇಜು ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.
ವಿದ್ಯಾರ್ಥಿಗಳ ವಿಚಾರದಲ್ಲಿ ವಿವಾದ ಇದೆ ಮೊದಲಲ್ಲ
ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಹುತೇಕ ಸರ್ಕಾರಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳು ಅನಿವಾರ್ಯ ಸಭೀಕರಾಗಿದ್ದಾರೆ. ಗಣ್ಯರ ಜಯಂತಿ ಕಾರ್ಯಕ್ರಮಗಳು, ಜಾಥಾಗಳು ವಿದ್ಯಾರ್ಥಿಗಳಿಲ್ಲದೆ ನಡೆಯಲು ಸಾಧವಿಲ್ಲ. ಆದರೆ ರಾಜಕಾರಣಿಗಳು ಭಾಗವಹಿಸುವ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಿರುವ ಕಾರ್ಯಕ್ರಮ, ಜಾಥಾಗಳಿಗೆ ಶಾಲೆ, ಕಾಲೇಜು ವಿದ್ಯಾರ್ಥಿಗಳ ಬಳಕೆ ವಿವಾದ ಹುಟ್ಟಿಸುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದ ಜೈಲ್ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್‌ಗಳು
ಶಿವಮೊಗ್ಗದಲ್ಲಿ ಗಲಭೆಗಳು ನಡೆದಾಗ ಶಾಂತಿಗಾಗಿ ನಡಿಗೆ ಜಾಥಾ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಲೆ, ಕಾಲೇಜು ವಿದ್ಯಾರ್ಥಿಗಳ ಕರೆತರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಕ್ರಮಕ್ಕು ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗಿತ್ತು. ಈಗ ಯುವ ನಿಧಿ ಯೋಜನೆ ಚಾಲನಾ ಕಾರ್ಯಕ್ರಮಕ್ಕು ವಿದ್ಯಾರ್ಥಿಗಳ ಕರೆತರಲಾಗುತ್ತಿದೆ. ಸದ್ಯ ಜಿಲ್ಲೆಯ ವಿದ್ಯಾರ್ಥಿಗಳು ಶಾಲೆ, ಕಾಲೇಜು ಚಟುವಟಿಕೆ ಜೊತೆಗೆ ಹೋರಾಟ, ಚಳವಳಿ, ಸಭೆ, ಸಮಾರಂಭಗಳಿಗೆ ಬಲ ತುಂಬುವ ಅನಿವಾರ್ಯವು ಎದುರಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200