ಸೂಡಾ ಅಧ್ಯಕ್ಷ ಮಧುಸೂದನ್‌ ಸೇರಿ ಮೂವರಿಗೆ ಸನ್ಮಾನ, ಯಾರೆಲ್ಲ ಏನೆಲ್ಲ ಮಾತನಾಡಿದರು?

ಶಿವಮೊಗ್ಗ: ಯುವಕರಿಗೆ ಆದ್ಯತೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನಗರದ ಗೋಪಾಲಗೌಡ ಬಡಾವಣೆಯ ಬಾಲಾಜಿ ಕನ್ವೆನ್ಷನ್ ಹಾಲ್‌ನಲ್ಲಿ 17ನೇ ವಾರ್ಡ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಸೂಡಾ ಅಧ್ಯಕ್ಷ ಸಿ.ಜೆ. ಮಧುಸೂಧನ್ ಹಾಗೂ ಇತರ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅವಕಾಶಗಳನ್ನು ಬಳಸಿಕೊಂಡು ಸಾರ್ವಜನಿಕರ ಸೇವೆ ಹಾಗೂ ಬಡವರ ಕಲ್ಯಾಣಕ್ಕಾಗಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.

SUDA-President-Madhu-Sudhan-felicitated-at-Shivamogga-Gopala-Gowda

ಅಭಿವೃದ್ಧಿಯಲ್ಲಿ ರಾಜಕಾರಣ ಬೇಡ

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಜಿ.ಡಿ. ಮಂಜುನಾಥ್, ‘₹40 ಲಕ್ಷ ವೆಚ್ಚದ ಸಾರ್ವಜನಿಕ ಶೌಚಾಲಯ ನಿರ್ಮಾಣದ ಕಾಮಗಾರಿ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. 17ನೇ ವಾರ್ಡ್‌ನ ಅಭಿವೃದ್ಧಿಗೆ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ’ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸೂಡಾ ಅಧ್ಯಕ್ಷ ಸಿ.ಜೆ. ಮಧುಸೂಧನ್, ಸಾರ್ವಜನಿಕರ ಸೇವೆಗಾಗಿ ತಮಗೆ ದೊರೆತಿರುವ ಹುದ್ದೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದಾಗಿ ತಿಳಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಕಾರ್ಯಕ್ರಮದಲ್ಲಿ ಭಾರತ್ ಜೋಡೋ ಯುವ ಸಂಘಟನೆಯ ಸಮನ್ವಯಾಧಿಕಾರಿ ಗೀತೇಂದ್ರ ಗೌಡ ಹಾಗೂ ಹಿಂದುಳಿದ ವರ್ಗಗಳ ಮಹಿಳಾ ಸಂಘಟನೆಯ ಸಂಚಾಲಕಿ ಕವಿತಾ ರಾಥೋಡ್ ಅವರನ್ನು ಸನ್ಮಾನಿಸಲಾಯಿತು.

17ನೇ ವಾರ್ಡ್ ಅಧ್ಯಕ್ಷ ಆರ್. ರಾಜಶೇಖರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಟಿ. ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: