ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನ ಹಂಚುವ ಗುರಿ ಹೊಂದಿದ್ದೇನೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ, ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಕಳೆದ 14 ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅಧ್ಯಕ್ಷ ಅವಧಿಯಲ್ಲಿ ನಿವೇಶನಗಳನ್ನು ಹಂಚುವ ಉದ್ದೇಶವಿದೆ ಎಂದರು.
ಇಲ್ಲಿದೆ 6 ಪ್ರಮುಖ ಪಾಯಿಂಟ್
ಪ್ರಾಧಿಕಾರದ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ನಗರದ ಊರುಗಡೂರು ಗ್ರಾಮದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುತ್ತಿದೆ. ಸಿವಿಲ್ ಕಾಮಗಾರಿ ಪ್ರಗತಿಯಲ್ಲಿದೆ. ಅದು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಲಾಗುವುದು ಹಾಗೂ ಊರುಗಡೂರಿನಲ್ಲಿ ಲಭ್ಯವಿರುವ 4 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು
ಸೋಮಿನಕೊಪ್ಪದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 1 ಎಕರೆ 9 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ (ಜಿ+3) ನಿರ್ಮಾಣ ಮಾಡಲಾಗುವುದು.
ಸ್ಥಳೀಯ ಪ್ರದೇಶಾಭಿವೃದ್ಧಿ ವ್ಯಾಪ್ತಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ.
ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಪ್ರಮುಖ ವೃತ್ತಗಳನ್ನು ಹಾಗೂ ಉದ್ಯಾನಗಳನ್ನು ಗುರುತಿಸಿ ಅಭಿವೃದ್ಧಿ ಮಾಡಲಾಗುವುದು.
ಪ್ರಾಧಿಕಾರದಿಂದ ಈಗಾಗಲೆ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.
ಇದನ್ನೂ ಓದಿ – ಕಿಟಕಿ ಕೊರೆದು ವೀಕ್ಷಣಾಲಯದಿಂದ ಪರಾರಿಯಾಗಿದ್ದ ಮೂವರು ಪೊಲೀಸ್ ವಶಕ್ಕೆ, ಎಲ್ಲೆಲ್ಲಿ ಸಿಕ್ಕರು?
ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನ ಅಭಿವೃದ್ಧಿ ಇತ್ಯಾದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 25 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಸೂಡಾ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ಎಂಜಿನಿಯರ್ ಬಸವರಾಜಪ್ಪ ಉಪಸ್ಥಿತರಿದ್ದರು.