ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಆಕ್ರೋಶ, ವಿಮಾನಯಾನ ಸಿಬ್ಬಂದಿ ಜೊತೆ ಮಾತಿನ ಚಕಮಕಿ

Published On : ಏಪ್ರಿಲ್ 17, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ವಿಮಾನ ನಿಲ್ದಾಣದಿಂದ ಹೈದರಾಬಾದ್‌ಗೆ ತೆರಳಬೇಕಿದ್ದ ಸ್ಪೈಸ್‌ಜೆಟ್ ವಿಮಾನವು (flight) ತಾಂತ್ರಿಕ ಕಾರಣಗಳಿಂದಾಗಿ ಹಠಾತ್ತಾಗಿ ರದ್ದಾಗಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು.

ವಿಮಾನ ಹಾರಾಟದ ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರಿಗೆ, ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷದ ನೆಪವೊಡ್ಡಿ ಪ್ರಯಾಣ ರದ್ದುಗೊಳಿಸಿರುವ ಮಾಹಿತಿ ನೀಡಲಾಯಿತು. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Passangers-angry-against-Spice-jet-Flight-cancelled-in-Shimoga-Airport

ಪೂಜಾ ಕಾರ್ಯಕ್ರಮಕ್ಕೆ ಅಡ್ಡಿ

ಹೈದರಾಬಾದ್‌ನಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಉಡುಪಿಯಿಂದ ಆಗಮಿಸಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನ ರದ್ದತಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದರು. “ವಿಮಾನ ರದ್ದಾಗುವ ಕುರಿತು ಮೊದಲೇ ಮಾಹಿತಿ ನೀಡಬೇಕಿತ್ತು. ವಿಮಾನ ನಿಲ್ದಾಣಕ್ಕೆ ಬಂದ ನಂತರ ವಿಷಯ ತಿಳಿಸಿರುವುದು ಸರಿಯಲ್ಲ” ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ : ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್‌ನಲ್ಲಿ ಪಾಸ್‌, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 17, 2026

Leave a Comment