ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020
ಅನುಮತಿ ಪಡೆಯದೆ ದಿಢೀರನೆ ರಸ್ತೆ ತಡೆ ನಡೆಸಿದ ವಿದ್ಯಾರ್ಥಿ ಸಂಘಟನೆಯೊಂದರ ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿ, ಬಂಧಿಸಿದ್ದಾರೆ. ಬಿ.ಹೆಚ್.ರಸ್ತೆಯಲ್ಲಿ ಸಂಘಟನೆ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದರು.
ಸಂಜೆ ವೇಳೆಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸಂಘಟನೆಯ ಕಾರ್ಯಕರ್ತರು ಮಾರ್ಡನ್ ಟಾಕೀಸ್ ಬಳಿ ಪ್ರತಿಭಟನೆ ನಡೆಸಿದರು. ಹಠಾತ್ ಪ್ರತಿಭಟನೆ ಮತ್ತು ರಸ್ತೆ ತಡೆಯಿಂದಾಗಿ, ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಕೂಡಲೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರನ್ನು ಒತ್ತಾಯವಾಗಿ ರಸ್ತೆಯಿಂದ ತೆರವು ಮಾಡಲು ಮುಂದಾದರು. ಈ ವೇಳೆ ಪ್ರತಿಭಟನಾಕಾರರು ರಸ್ತೆಯಿಂದ ಮೇಲೇಳಲು ಒಪ್ಪಲಿಲ್ಲ.
ಕೆಲವರಿಗೆ ಲಾಠಿ ಏಟಿನ ರುಚಿ
ಪ್ರತಿಭಟನೆ ನಿಲ್ಲಸದಿದ್ದ ಹಿನ್ನೆಲೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಇದರಿಂದ ಕೆಲವೇ ಕ್ಷಣದಲ್ಲಿ ಗುಂಪು ಚದುರಿತು. ಬಿ.ಹೆಚ್.ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಯಿತು. ದಿಢೀರ್ ಪ್ರತಿಭಟನೆಯಿಂದಾಗಿ ಬಿ.ಹೆಚ್.ರಸ್ತೆ, ನೆಹರೂ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು.
ದಿಢೀರ್ ಪ್ರತಿಭಟನೆಗೇನು ಕಾರಣ?
ಪೌರತ್ವ ಕಾಯ್ದೆ ವಿರೋಧಿಸಿ ಸಿಎಫ್ಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಗೆ ನಿರ್ಧರಿಸಿದ್ದರು. ಆದರೆ ಪೂರ್ವಾನುಮತಿ ಇಲ್ಲದೆ ಹಠಾತ್ ಪ್ರತಿಭಟನೆ ಮಾಡಿದ್ದರಿಂದ ಗೊಂದಲ ಸೃಷ್ಟಿಯಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422