ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಎನ್.ಸುಧೀರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧಿಕಾರ ಹಂಚಿಕೆ ಸಂದರ್ಭ ನಡೆದಿದ್ದ ಒಪ್ಪಂದದಂತೆ ಎಸ್.ಕೆ.ಮರಿಯಪ್ಪ ರಾಜೀನಾಮೆ ಸಲ್ಲಿಸಿದ್ದರು. (ಈ ಸುದ್ದಿಯನ್ನು ಇನ್ನು 17 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಶುಕ್ರವಾರ ನಡೆದ ನಿರ್ದೇಶಕರ ಸಭೆಯಲ್ಲಿ ಸುಧೀರ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಶಿವಮೊಗ್ಗ ಕೊಡಚಾದ್ರಿ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ, ಎರಡು ಬಾರಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸುಧೀರ್ ಕಾರ್ಯನಿರ್ವಹಿಸಿದ್ದಾರೆ.
