ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಾನಸಾಧಾರ ಟ್ರಸ್ಟ್, ಮನಃಸ್ಪೂರ್ತಿ ವಿಶೇಷ ಶಾಲೆ ಮತ್ತು ಕಲಿಕಾ ಕೇಂದ್ರ ಹಾಗೂ ನಮ್ಮ ಹಳ್ಳಿ ಥಿಯೇಟರ್ ಸಹಯೋಗದೊಂದಿಗೆ 6 ರಿಂದ 9ನೇ ತರಗತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗಾಗಿ ಮನಃಸ್ಫೂರ್ತಿ ಶಿಬಿರ (summer camp) ಆಯೋಜಿಸಲಾಗಿದೆ. ಇದು ಏಪ್ರಿಲ್ 13ರಿಂದ 25ರವರೆಗೆ ಪ್ರತಿ ದಿನ ಬೆಳಿಗ್ಗೆ 9:30 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
ಶಿಬಿರದಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಮೌಲ್ಯಯುತ ಶಿಕ್ಷಣ, ಸಾಂಸ್ಕೃತಿಕ ಕಾರ್ಯಕ್ರಮ, ಗಾಯನ, ಹಾಸ್ಯ ಕಥೆ, ನಾಟಕ, ಚಿತ್ರಕಲೆ, ನೃತ್ಯ, ಜಾದು, ಮೇಕಪ್, ಯೋಗ, ಧ್ಯಾನ, ಅರಿವು, ಸಿನಿಮಾ ವೀಕ್ಷಣೆ, ಪ್ಲೇ ಮಾಡೆಲ್, ಪ್ರವಾಸ, ತೊಗಲು ಗೊಂಬೆಯಾಟ, ಯಕ್ಷಗಾನ, ಓರಿಗಾಮಿ, ಚಿತ್ರಕಲೆ, ಮೂಕಾಭಿನಯ, ಆರೋಗ್ಯ, ಸಾಮಾನ್ಯ ಜ್ಞಾನ ಮತ್ತು ಮಕ್ಕಳ ಹಕ್ಕುಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಇದನ್ನೂ ಓದಿ – ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್
ಶಿಬಿರವು ಸಂಪೂರ್ಣ ಉಚಿತವಾಗಿದ್ದು, 6 ರಿಂದ 9ನೇ ತರಗತಿಯ 60 ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತದೆ. ಆಸಕ್ತ ವಿದ್ಯಾರ್ಥಿಗಳ ಪೋಷಕರು ಏಪ್ರಿಲ್ 4ರ ಒಳಗಾಗಿ ಶಿವಮೊಗ್ಗದ ಜೆಪಿಎನ್ ರಸ್ತೆಯ ಮಾನಸ ನರ್ಸಿಂಗ್ ಹೋಂ ಬಳಿಯ ಮನಃಸ್ಫೂರ್ತಿ ಕಲಿಕಾ ಕೇಂದ್ರದಲ್ಲಿ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮನಃಸ್ಫೂರ್ತಿ ಕಚೇರಿ ಮೊ.ಸಂ, 88675-40973, ಶಿಬಿರದ ಸಂಚಾಲಕರಾದ ಮಂಜುನಾಥ್ ಸ್ವಾಮಿ 98450-14229 ಹಾಗೂ ರಂಗನಾಯಕಿ 96636-45373 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















