SHIVAMOGGA LIVE NEWS | 1 SEPTEMBER 2023
SHIMOGA : ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆಗೆ ಅವಹೇಳನ ಮಾಡಿದ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಕ್ಷಣ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ಅವರ ಅವಹೇಳನ ಮಾಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಠಾಣೆಗೆ ಹಾಜರಾಗಿದ್ದ ಚಕ್ರವರ್ತಿ ಸೂಲಿಬೆಲೆ ಸ್ಟೇಷನ್ ಬೇಲ್ ಪಡೆದು ಹೊರಬಂದಿದ್ದಾರೆ. ಆ ಬಳಿಕ ಅವರು ನೀಡಿದ ಹೇಳಿಕೆ ಸಹಿಸುವಂತದ್ದಲ್ಲ. ಆದ್ದರಿಂದ ಚಕ್ರವರ್ತಿ ಸೂಲಿಬೆಲೆ ಸೌಗಂಧಿಕ ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ರಾಖಿ ಕಟ್ಟಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ್ದ ಖಾಸಗಿ ಶಾಲೆ, ಪೋಷಕರ ಆಕ್ರೋಶ
ಮಹಿಳೆ, ಭಾರತೀಯ ಸಂಸ್ಕೃತಿ ಕುರಿತು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡುತ್ತಾರೆ. ಆದರೆ ಮಹಿಳೆಯ ನಿಂದನೆ ಮಾಡುತ್ತಿರುವುದು ಯಾವ ಸಂಸ್ಕೃತಿ. ಪ್ರಕರಣ ಸಂಬಂಧ ಆಗಾಗ ಹೇಳಿಕೆಗಳನ್ನು ತಿರುಚುತ್ತಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಸೌರ್ಹಾದ ವಾತಾವರಣವಿದೆ. ಚಕ್ರವರ್ತಿ ಸೂಲಿಬೆಲೆ ಇಲ್ಲಿ ವಿಷ ಬೀಜ ಬಿತ್ತಿವುದು ಬೇಡ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಚಂದ್ರಭೂಪಾಲ್, ಸೌಗಂಧಿಕ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200