ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2020
ರಾಜ್ಯ ಸರ್ಕಾರ ಕರ್ನಾಟಕದಲ್ಲಿ ವಿಧಿಸಿದ್ದ ಎಲ್ಲಾ ಬಗೆಯ ಲಾಕ್ಡೌನ್ ಹಿಂಪಡೆದಿದೆ. ಜಿಲ್ಲಾಡಳಿತ ಹಳೆ ಶಿವಮೊಗ್ಗವನ್ನು ಪ್ರತ್ಯೇಕವಾಗಿ ಸೀಲ್ಡೌನ್ ಮಾಡಿದ್ದ ಆದೇಶವನ್ನು ಒಂದೇ ದಿನದಲ್ಲಿ ರದ್ದುಗೊಳಿಸಿದೆ. ಆದರೆ ಸಂಡೆ ಲಾಕ್ಡೌನ್ ಮುಂದುವರೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯಲ್ಲಿಯು ಭಾನುವಾರದ ಲಾಕ್ಡೌನ್ ಮುಂದುವರೆಯಲಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶಿವಮೊಗ್ಗ ಲೈವ್.ಕಾಂಗೆ ಇದನ್ನು ಖಚಿತಪಡಿಸಿದ್ದಾರೆ.
ಸದ್ಯ ಸಂಡೆ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂಗಳು ಜಾರಿಯಲ್ಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರುತ್ತದೆ. ಮುಂದಿನ ಆದೇಶದವರೆಗೆ ಭಾನುವಾರದ ಕರ್ಫ್ಯೂ ಕೂಡ ಮುಂದುವರೆಯಲಿದೆ.
ಹಾಗಾಗಿ ಇವತ್ತು ರಾತ್ರಿ 9 ಗಂಟೆಯಿಂದಲೇ ಲಾಕ್ಡೌನ್ ಜಾರಿಗೆ ಬರಲಿದೆ. ಸೋಮವಾರದ ಬೆಳಗ್ಗೆ 5 ಗಂಟೆವರೆಗೆ ಲಾಕ್ಡೌನ್ ಜಾರಿಯಲ್ಲಿ ಇರಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]